ದೇಶ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಚಿತ್ರಮಂದಿರದಲ್ಲಿ ಪ್ರತ್ಯಕ್ಷನಾದ ರಾಹುಲ್ ಗಾಂಧಿ!

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಏನೇ ಆದರೂ ನಾನು ಮತ್ತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರಲ್ಲ ಎಂದು ಹೇಳುತ್ತಿದ್ದು ರಾಜಕೀಯದ ಜಂಜಾಟದ ನಡುವೆ ಕೊಂಚ ವಿರಾಮ ತೆಗೆದುಕೊಂಡು ಸಿನಿಮಾ...

Published On :
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಏನೇ ಆದರೂ ನಾನು ಮತ್ತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರಲ್ಲ ಎಂದು ಹೇಳುತ್ತಿದ್ದು ರಾಜಕೀಯದ ಜಂಜಾಟದ ನಡುವೆ ಕೊಂಚ ವಿರಾಮ ತೆಗೆದುಕೊಂಡು ಸಿನಿಮಾ ವೀಕ್ಷಿಸಿದ್ದಾರೆ.
ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಅಭಿನಯದ ಆರ್ಟಿಕಲ್ 15 ಚಿತ್ರವನ್ನು ದೆಹಲಿಯ ಪಿವಿಆರ್ ಚಾಣಕ್ಯ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ಪಾಪ್ ಕಾರ್ನ್ ಸವಿಯುತ್ತ ಚಿತ್ರ ವೀಕ್ಷಿಸುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ವಿಡಿಯೋದಲ್ಲಿ ಬಿಳಿ ಟೀ ಶರ್ಟ್ ಧರಿಸಿರುವ ರಾಹುಲ್ ಗಾಂಧಿ ಭಾರತದ ಜಾತಿ ವ್ಯವಸ್ಥೆ ಸಮಸ್ಯೆಯನ್ನು ಆಧರಿಸಿದ ಚಿತ್ರವನ್ನು ನೋಡಿದ್ದಾರೆ. ಆರ್ಟಿಕಲ್ 15 ಜೂನ್ 28ರಂದು ಬಿಡುಗಡೆಯಾಗಿ ಮಿಶ್ರಪ್ರತಿಕ್ರಿಯೆ ಪಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.