ರಾಷ್ಟ್ರಮಟ್ಟದಲ್ಲಿ 'ಕೈ'ಪಕ್ಷಕ್ಕೆ ಶಾಕ್ ಮೇಲೆ ಶಾಕ್! ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ
ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಭಾನುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Published On :
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಭಾನುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಮುಂಬೈ ಘಟಕದ ಮುಖ್ಯಸ್ಥ ಮಿಲಿಂದ್ ಡಿಯೋರಾ ಅವರು ರಾಹುಲ್ ಗಾಂಧಿಯನ್ನು ಭೇಟಿಯಾದ ಕೆಲವೇ ಗಂಟೆಗಳಲ್ಲಿ ಮುಂಬೈ ನಗರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಇದೀಗ ಸಿಂಧಿಯಾ ಸಹ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.
"ಜನರ ತೀರ್ಪನ್ನು ಅಂಗೀಕರಿಸುವುದು ಮತ್ತು ಹೊಣೆ ಹೊತ್ತುಕೊಳ್ಳುವುದು ನನ್ನ ಕರ್ತವ್ಯ, ನಾನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ.ಎಂದು ಸಿಂಧಿಯಾ ಟ್ವೀಟ್ ಮಾಡಿದ್ದಾರೆ.
ಈ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಮತ್ತು ಪಕ್ಷದ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ"ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Jyotiraditya Scindiaಜ್ಯೋತಿರಾದಿತ್ಯ ಸಿಂಧಿಯಾCongress general secretaryಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


