ಮುಂಬೈ-ಮಂಗಳೂರು ಕೊಂಕಣ ರೈಲ್ವೆ ಮಾರ್ಗ ಸಂಪೂರ್ಣ ವಿದ್ಯುದೀಕರಣ: ರೈಲ್ವೆ ಸಚಿವ ಪಿಯೂಷ್ ಗೋಯಲ್
ಗೋವಾ ಮಾರ್ಗವಾಗಿ ಮುಂಬೈ-ಮಂಗಳೂರು ಕೊಂಕಣ ರೈಲ್ವೆ ಮಾರ್ಗವನ್ನು 11,000 ಕೋಟಿ ರೂ ವೆಚ್ಚದಲ್ಲಿ ವಿದ್ಯುದೀಕರಣಗೊಳಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ

Published On :
ಪಣಜಿ: ಗೋವಾ ಮಾರ್ಗವಾಗಿ ಮುಂಬೈ-ಮಂಗಳೂರು ಕೊಂಕಣ ರೈಲ್ವೆ ಮಾರ್ಗವನ್ನು 11,000 ಕೋಟಿ ರೂ ವೆಚ್ಚದಲ್ಲಿ ವಿದ್ಯುದೀಕರಣಗೊಳಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ
ಬಿಜೆಪಿ ಸದಸ್ಯತ್ವ ಅಭಿಯಾನ ಅಂಗವಾಗಿ ನಿನ್ನೆ ಇಲ್ಲಿ ಆಯೋಜಿಸಿದ್ದ ಸಮಾರಂಭದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಂಬೈ-ಮಂಗಳೂರು ಮಾರ್ಗವನ್ನು ಈ ಯೋಜನೆಯಡಿ ಸಂಪೂರ್ಣ ವಿದ್ಯುದೀಕರಣಗೊಳಿಸಲಾಗುವುದು, ಇದರಿಂದ ರಮ್ಯ ಪ್ರಕೃತಿ ಸೊಬಗು ಇರುವ ಕೊಂಕಣ ರೈಲ್ವೆ ಮಾರ್ಗ ಮಾಲಿನ್ಯ ಮುಕ್ತಗೊಂಡು ವೇಗವೂ ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ
ವಿಶ್ವದಲ್ಲೇ ಅತ್ಯುತ್ತಮ ಸೇವೆ ಮತ್ತು ದರ್ಜೆಯನ್ನಾಗಿಸಲು ರೈಲ್ವೆ ವಲಯದಲ್ಲಿ 2030ರ ವೇಳೆಗೆ 50 ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಸರ್ಕಾರ ಉದ್ದೇಶಿಸಿದೆ. ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಕೈಗೊಳ್ಳಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಪ್ರವಾಸೋದ್ಯಮ ತಾಣವಾದ ಗೋವಾದಲ್ಲಿ ರೈಲು ಸಂಪರ್ಕ ವೃದ್ದಿಸಲು ಒತ್ತು ನೀಡಲಾಗಿದೆ. ಸಾಂಪ್ರದಾಯಿಕ ಹಳೆ ಬೋಗಿಗಳನ್ನು ಅತ್ಯಾಧುನಿಕ ಬೋಗಿಗಳೊಂದಿಗೆ ಬದಲಾಯಿಸುವ ಕಾರ್ಯ ವೇಗದಿಂದ ಸಾಗಿದೆ. ಮೇಕ್ ಇನ್ ಇಂಡಿಯಾ ಕಾರ್ಯಕ್ರಮದಡಿ ದೇಶೀಯವಾಗಿಯೇ ವಿಶ್ವದರ್ಜೆಯ ಬೋಗಿಗಳ ಉತ್ಪಾದನೆಯಾಗುತ್ತಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


