ಕಾಶ್ಮೀರ: ಹಿರಿಯ ಕಾಂಗ್ರೆಸ್ ನಾಯಕ ಮೊಹಮ್ಮದ ಇಖ್ಬಾಲ್ ಸೇರಿ ಹಲವು ಕಾರ್ಯಕರ್ತರು ಬಿಜೆಪಿ ಸೇರ್ಪಡೆ
ಕರ್ನಾಟಕ ಸೇರಿದಂತೆ ದೇಶಾದ್ಯಂತ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರುತ್ತಿದ್ದು, ಇದೀಗ ಪಕ್ಷಾಂತರ ಪರ್ವದ ಬಿಸಿ ಕಾಶ್ಮೀರ ಕಣಿವೆಗೂ ತಟ್ಟಿದೆ.

Published On :
ಜಮ್ಮು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರುತ್ತಿದ್ದು, ಇದೀಗ ಪಕ್ಷಾಂತರ ಪರ್ವದ ಬಿಸಿ ಕಾಶ್ಮೀರ ಕಣಿವೆಗೂ ತಟ್ಟಿದೆ.
ಜಮ್ಮು ಮತ್ತು ಕಾಶ್ಮೀರದ ಹಿರಿಯ ಕಾಂಗ್ರೆಸ್ ನಾಯಕ ಮೊಹಮ್ಮದ್ ಇಖ್ಬಾಲ್ ಮಲಿಕ್ ಹಾಗೂ ಹಲವು ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬಿಜೆಪಿ ಸೇರಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯಿಂದ ಪ್ರೇರಿತರಾಗಿ ತಾವು ಬಿಜೆಪಿ ಸೇರುತ್ತಿರುವುದಾಗಿ ಮಲಿಕ್ ಅವರು ಹೇಳಿದ್ದಾರೆ.
ರಾಜೋರಿ ಜಿಲ್ಲೆಯ ದರ್ಹಾಲ್ ವಿಧಾನಸಭಾ ಕ್ಷೇತ್ರದ ಮಲಿಕ್ ಅವರು ಶನಿವಾರ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾದವ್ ಅವರ ನೇತೃತ್ವದಲ್ಲಿ ಮಲಿಕ್ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿದ್ದ ಅವರ ಹಲವು ಬೆಂಬಲಿಗರು ಬಿಜೆಪಿ ಸೇರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ಜಮ್ಮು ಮತ್ತು ಕಾಶ್ಮೀರJammu and Kashmirಬಿಜೆಪಿ ಸೇರ್ಪಡೆjoin BJPMohammad Iqbal Malikಮೊಹಮ್ಮದ್ ಇಖ್ಬಾಲ್ ಮಲಿಕ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


