ದೇಶ

ಕರ್ನಾಟಕ ಆಯ್ತು ಈಗ ಗೋವಾ ಕಾಂಗ್ರೆಸ್ ನಲ್ಲೂ ತಳಮಳ, 10 ಶಾಸಕರು ಬಿಜೆಪಿ ಸೇರ್ಪಡೆ

ಕರ್ನಾಟಕದ ರಾಜಕೀಯ ಮತ್ತು ಕಾಂಗ್ರೆಸ್ ಶಾಸಕರ ರಾಜಿನಾಮೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಅತ್ತ ಗೋವಾದಲ್ಲೂ ರಾಜಕೀಯ ಬೇಗುದಿ ಉಲ್ಪಣಿಸಿದೆ.

ಕರ್ನಾಟಕ ಆಯ್ತು ಈಗ ಗೋವಾ ಕಾಂಗ್ರೆಸ್ ನಲ್ಲೂ ತಳಮಳ, 10 ಶಾಸಕರು ಬಿಜೆಪಿ ಸೇರ್ಪಡೆ
ಸಂಗ್ರಹ ಚಿತ್ರ
Published On :
ಪಣಜಿ: ಕರ್ನಾಟಕದ ರಾಜಕೀಯ ಮತ್ತು ಕಾಂಗ್ರೆಸ್ ಶಾಸಕರ ರಾಜಿನಾಮೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಅತ್ತ ಗೋವಾದಲ್ಲೂ ರಾಜಕೀಯ ಬೇಗುದಿ ಉಲ್ಪಣಿಸಿದೆ.
ಹೌದು.. ಕರ್ನಾಟಕದ ಬಳಿಕ ಈಗ ಗೋವಾದಲ್ಲೂ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬೆಂಬಲ ನೀಡಲು ಮುಂದಾಗಿದ್ದಾರೆ. ಗೋವಾ ಕಾಂಗ್ರೆಸ್ಸಿನ 15 ಶಾಸಕರ ಪೈಕಿ 10 ಜನ ಬಿಜೆಪಿಗೆ ಬೆಂಬಲ ನೀಡಲು ಮುಂದಾಗಿದ್ದಾರೆ. ವಿರೋಧ ಪಕ್ಷದ ನಾಯಕ ಬಾಬು ಕವಲೇಕರ್ ನೇತೃತ್ವದಲ್ಲಿ 10 ಶಾಸಕರು ಪ್ರತ್ಯೇಕವಾಗಿ ಬಿಜೆಪಿಗೆ ಬೆಂಬಲ ನೀಡಲು ಮುಂದಾಗಿದ್ದಾರೆ.
ಈ ಸಂಬಂಧ ಶಾಸಕರೆಲ್ಲ ಸ್ಪೀಕರ್ ಅವರನ್ನು ಭೇಟಿ ಮಾಡಿದ್ದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಒಟ್ಟು 40 ಶಾಸಕರು ಇರವ ವಿಧಾನಸಭೆಯಲ್ಲಿ ಬಿಜೆಪಿ 17, ಕಾಂಗ್ರೆಸ್ 15, ಜೆಎಫ್‍ಎಫ್ 3, ಎಂಜಿಪಿ 1, ಎನ್‍ಸಿಪಿ 2, ಇಬ್ಬರು ಪಕ್ಷೇತರರು ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಮಾತನಾಡಿರುವ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು, 'ವಿಪಕ್ಷ ನಾಯಕರೂ ಸೇರಿದಂತೆ 10 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಬಿಜೆಪಿ ಬಲ 27ಕ್ಕೆ ಏರಿಕೆಯಾಗಿದ್ದು, ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿತೊಂಡು ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆಗೆ ಅವರು ಯಾವುದೇ ರೀತಿಯ ಷರತ್ತು ವಿಧಿಸಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.