ಸೆಪ್ಟೆಂಬರ್ ತಿಂಗಳಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಮಿತಿ ಸಭೆ, ಪ್ರಧಾನಿ ಮೋದಿ ಭಾಗಿ ಸಾಧ್ಯತೆ
ಸೆಪ್ಟೆಂಬರ್ ತಿಂಗಳಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಮಿತಿ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುವ ಸಾಧ್ಯತೆ ಇದೆ. ಈ ಪ್ರವಾಸದ ವೇಳೆಯಲ್ಲಿ ಹೌಸ್ಟಾನ್ ನಲ್ಲಿರುವ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮೋದಿ ಭಾಷಣ ಮಾಡುವ ನಿರೀಕ್ಷೆಯಿದೆ.

Published On :
ನವದೆಹಲಿ : ಸೆಪ್ಟೆಂಬರ್ ತಿಂಗಳಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಮಿತಿ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುವ ಸಾಧ್ಯತೆ ಇದೆ. ಈ ಪ್ರವಾಸದ ವೇಳೆಯಲ್ಲಿ ಹೌಸ್ಟಾನ್ ನಲ್ಲಿರುವ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮೋದಿ ಭಾಷಣ ಮಾಡುವ ನಿರೀಕ್ಷೆಯಿದೆ.
ನ್ಯೂಯಾರ್ಕ್ ನಲ್ಲಿರುವ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯ ಸಮಿತಿ ಸಭೆ ಬಳಿಕ ಚಿಕಾಗೋ ಹಾಗೂ ಹೊಸ್ಟಾನ್ ನಲ್ಲಿರುವ ಅನಿವಾಸಿ ಭಾರತೀಯರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಮೋದಿ ಅಮೆರಿಕಾ ಪ್ರವಾಸದ ಬಗ್ಗೆ ಅಧಿಕೃತ ಘೋಷಣೆ ಹೊರಬಿದಿಲ್ಲ. ಸೆಪ್ಟೆಂಬರ್ 23 ರಂದು ನಡೆಯಲಿರುವ ಹವಾಮಾನ ವೈಫರೀತ್ಯ ಕುರಿತ ವಿಶೇಷ ಸಭೆಯಲ್ಲಿ ಭಾಷಣ ಮಾಡಲು ಹೊಸ್ಟನ್ ನಿಂದ ನ್ಯೂಯಾರ್ಕ್ ಗೆ ಮೋದಿ ಪ್ರಯಾಣಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪ್ರಧಾನಿ ಮೋದಿ ಭಾಷಣ ಮಾಡಲಿರುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಆದರೆ, ಸೆಪ್ಟೆಂಬರ್ 22 ರಂದು ಹೌಸ್ಟಾನ್ ನಲ್ಲಿ ಮೋದಿ ಮಾಡಲಿರುವ ಭಾಷಣಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ ಎಂದು ಅನಿವಾಸಿ ಸಮುದಾಯದ ಮುಖಂಡರು ಹೇಳಿದ್ದಾರೆ.
ಹೊಸ್ಟನ್ ಜಗತ್ತಿನ ಇಂಧನ ಮೂಲದ ಪ್ರಮುಖ ಕೇಂದ್ರವಾಗಿದೆ. ಇಂಧನ ಸುರಕ್ಷತೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮುಖ ಆದ್ಯತೆಯಾಗಿದೆ. ಹೂಸ್ಟನ್ ಎನ್ ಆರ್ ಜಿ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದೆ. ಇದರಲ್ಲಿ 70 ಜನರು ಕೂರಬಹುದಾದ ಆಸನಗಳ ವ್ಯವಸ್ಥೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PM Modiಅನಿವಾಸಿ ಭಾರತೀಯರುIndian-AmericansಭಾಷಣUN General Assembly MeetAddress ಪ್ರಧಾನಿ ಮೋದಿವಿಶ್ವಸಂಸ್ಥೆ ಸಾಮಾನ್ಯ ಸಮಿತಿ ಸಭೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


