ದೇಶ

ರಾಜ್ಯ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟು, ಶಾಸಕರ ರಾಜೀನಾಮೆ ಕುರಿತು ಮೌನ ಮುರಿದ ರಾಹುಲ್ ಗಾಂಧಿ

16 ಶಾಸಕರ ರಾಜೀನಾಮೆ ನಿರ್ಧಾರದಿಂದ ರಾಜ್ಯ ಸಮ್ಮಿಶ್ರ ಸರ್ಕಾರ ಪತನದ ಆತಂಕ ಎದುರಿಸುತ್ತಿರುವ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೌನ ಮುರಿದಿದ್ದಾರೆ.

ರಾಜ್ಯ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟು, ಶಾಸಕರ ರಾಜೀನಾಮೆ ಕುರಿತು ಮೌನ ಮುರಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :
ಅಹ್ಮದಾಬಾದ್: 16 ಶಾಸಕರ ರಾಜೀನಾಮೆ ನಿರ್ಧಾರದಿಂದ ರಾಜ್ಯ ಸಮ್ಮಿಶ್ರ ಸರ್ಕಾರ ಪತನದ ಆತಂಕ ಎದುರಿಸುತ್ತಿರುವ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೌನ ಮುರಿದಿದ್ದಾರೆ. 
ಬಿಜೆಪಿ ವಿರುದ್ಧ ಆರೋಪ ಮಾಡಿರುವ ರಾಹುಲ್ ಗಾಂಧಿ, ಬಿಜೆಪಿ ಹಣ ಹಾಗೂ ಅಧಿಕಾರದ ಬಲವನ್ನು ಬಳಸಿಕೊಂಡು ಸರ್ಕಾರ ಉರುಳಿಸಲು ಯತ್ನಿಸಿದೆ, ಬೇರೆಡೆಗಳಲ್ಲೂ ಇದೇ ಮಾದರಿಯಲ್ಲಿ ಸರ್ಕಾರಗಳನ್ನು ಉರುಳಿಸಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 
ಅವಕಾಶ ಸಿಕ್ಕಾಗಲೆಲ್ಲಾ ಬಿಜೆಪಿ ಸರ್ಕಾರಗಳನ್ನು ಉರುಳಿಸಲು ಹಣ ಹಾಗೂ ಅಧಿಕಾರದ ಬಲವನ್ನು ಪ್ರಯೋಗಿಸಿದೆ. ಇದನ್ನು ಮೊದಲು ಗೋವಾದಲ್ಲಿ ನೋಡಿದ್ದೀರಿ, ಈಶಾನ್ಯ ರಾಜ್ಯಗಳಲ್ಲಿ ನೋಡಿದ್ದೀರಿ ಇದನ್ನೇ ಈಗ ಕರ್ನಾಟಕದಲ್ಲಿಯೂ ಬಳಸಿಕೊಳ್ಳಲಾಗುತ್ತಿದೆ. ಇದು ಬಿಜೆಪಿಯ ಕಾರ್ಯವಿಧಾನ ಇದೇ ಸತ್ಯ ಎಂದು ಅಹ್ಮದಾಬಾದ್ ನಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.