ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರ ನೀರಜ್ ಬಿಜೆಪಿ ಸೇರ್ಪಡೆ
ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಪುತ್ರ ನೀರಜ್ ಶೇಖರ್ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

Published On :
ನವದೆಹಲಿ: ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಪುತ್ರ ನೀರಜ್ ಶೇಖರ್ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.
ನಿನ್ನೆಯಷ್ಟೇ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ನೀರಜ್ ಶೇಖರ್ ಅವರು ಇಂದು ಬಿಜೆಪಿ ಸೇರಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿ, ಪ್ರಧಾನ ಕಾರ್ಯದರ್ಶಿ ಭುಪೇಂದರ್ ಯಾದವ್ ಅವರ ಸಮ್ಮುಖದಲ್ಲಿ ನೀರಜ್ ಶೇಖರ್(50) ಬಿಜೆಪಿ ಸೇರ್ಪಡೆಯಾದವರು. ಅವರು ಸೋಮವಾರ ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಮಂಗಳವಾರ ಬೆಳಗ್ಗೆ ವೆಂಕಯ್ಯ ನಾಯ್ಡು ಅವರು ರಾಜೀನಾಮೆ ಸ್ವೀಕೃತವಾಗಿರುವುದಾಗಿ ಘೋಷಿಸಿದರು. ನಂತರ, ಶೇಖರ್ ಅವರು ಬಿಜೆಪಿ ಮುಖ್ಯಸ್ಥ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


