ಭಾರತೀಯ ನಾಗರಿಕ ವಿಮಾನಗಳಿಗೆ ವಾಯು ಪ್ರದೇಶ ನಿರ್ಬಂಧ ತೆರವುಗೊಳಿಸಿದ ಪಾಕ್
ಪಾಕಿಸ್ತಾನ ಗಡಿಯಲ್ಲಿ ಭಾರತ ನಿಯೋಜಿಸಿರುವ ಯುದ್ಧವಿಮಾನಗಳನ್ನು ಹಿಂಪಡೆಯುವವರೆಗೆ ತನ್ನ ವಾಯು ಪ್ರದೇಶದಲ್ಲಿ....

Published On :
ನವದೆಹಲಿ: ಪಾಕಿಸ್ತಾನ ಗಡಿಯಲ್ಲಿ ಭಾರತ ನಿಯೋಜಿಸಿರುವ ಯುದ್ಧವಿಮಾನಗಳನ್ನು ಹಿಂಪಡೆಯುವವರೆಗೆ ತನ್ನ ವಾಯು ಪ್ರದೇಶದಲ್ಲಿ ಭಾರತದ ನಾಗರಿಕ ವಿಮಾನದ ಸಂಚಾರಕ್ಕೆ ಅವಕಾಶ ಕಲ್ಪಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದ ಪಾಕಿಸ್ತಾನ, ಈಗ ತನ್ನ ಹಠ ಸಡಿಲಿಸಿ, ವಾಯುಪ್ರದೇಶವನ್ನು ಎಲ್ಲಾ ರೀತಿಯ ನಾಗರಿಕ ಸಂಚಾರಕ್ಕೆ ಮುಕ್ತವಾಗಿಸುವುದಾಗಿ ಘೋಷಿಸಿದೆ.
ಪಾಕಿಸ್ತಾನದ ಈ ನಿರ್ಧಾರವನ್ನು ಭಾರತದ ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಉಷಾ ಪಿ ಸ್ವಾಗತಿಸಿದ್ದಾರೆ. 'ಇದು ಉತ್ತಮ ಸುದ್ದಿ. ಇದರಿಂದ ವಿಮಾನ ಪ್ರಯಾಣಿಕರಿಗೆ ಅನುಕೂಲವಾಗಲಿದೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದರಿಂದ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ನೆರವಾಗಲಿದೆ. ಇತ್ತೀಚೆಗಷ್ಟೇ ಅಮೆರಿಕದ ಏರ್ ಲೈನ್ಸ್ ಸಂಸ್ಥೆ, ಪಾಕಿಸ್ತಾನದ ವಾಯು ಪ್ರದೇಶದ ನಿರ್ಬಂಧದ ಹಿನ್ನೆಲೆಯಲ್ಲಿ ಅಕ್ಟೋಬರ್ 26ರವರೆಗೆ ಅಮೆರಿಕದಿಂದ ದೆಹಲಿ ಹಾಗೂ ಮುಂಬೈಗೆ ಪ್ರಯಾಣಿಸುವ ವಿಮಾನ ಸಂಚಾರವನ್ನು ರದ್ದುಗೊಳಿಸುವುದಾಗಿ ಪ್ರಕಟಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


