ಭಾರತದ ಇಂಚಿಂಚೂ ಹುಡುಕಿ ಅಕ್ರಮ ವಲಸಿಗರ ಗಡೀಪಾರು ಮಾಡುತ್ತೇವೆ: ಅಮಿತ್ ಶಾ
ದೇಶದಲ್ಲಿ ನೆಲೆಸಿರುವ ಎಲ್ಲ ಅಕ್ರಮ ವಲಸಿಗರನ್ನು ಗುರುತಿಸಿ ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರ ಗಡೀಪಾರು ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.

Published On :
ನವದೆಹಲಿ: ದೇಶದಲ್ಲಿ ನೆಲೆಸಿರುವ ಎಲ್ಲ ಅಕ್ರಮ ವಲಸಿಗರನ್ನು ಗುರುತಿಸಿ ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರ ಗಡೀಪಾರು ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.
"ಈ ದೇಶದ ಪ್ರತಿ ಅಂಗುಲವನ್ನೂ ಪರಿಶೀಲಿಸಿ ಇಲ್ಲಿ ವಾಸಿಸುತ್ತಿರುವ ಎಲ್ಲಾ ಅಕ್ರಮ ವಲಸಿಗರು ಮತ್ತು ನುಸುಳುಕೋರರನ್ನು ನಾವು ಗುರುತಿಸುತ್ತೇವೆ ಮತ್ತು ಅವರನ್ನು ಅಂತರರಾಷ್ಟ್ರೀಯ ಕಾನೂನಿನ ಪ್ರಕಾರ ಗಡೀಪಾರು ಮಾಡುತ್ತೇವೆ" ಎಂದು ಬಿಜೆಪಿ ನಾಯಕ ಶಾ ರಾಜ್ಯಸಭೆಯಲ್ಲಿ ಹೇಳಿದರು.
ಅಕ್ರಮ ವಲಸಿಗರ ಒಳನುಸುಳುವಿಕೆಯನ್ನು ಪರೀಕ್ಷಿಸಲು ಅಂತರರಾಷ್ಟ್ರೀಯ ಗಡಿಗಳ ಪರಿಣಾಮಕಾರಿ ಕಣ್ಗಾವಲು ಮತ್ತು ಪ್ರಾಬಲ್ಯವನ್ನು ಖಚಿತಪಡಿಸಿಕೊಳ್ಲಲಾಗುತ್ತದೆ.ಇದಕ್ಕಾಗಿ ಕೇಂದ್ರ ಸರ್ಕಾರವು ಬಹುರೂಪದ ವಿಧಾನವನ್ನು ಅನುಸರಿಸಲಿದೆ.
ಗಡಿ ರಸ್ತೆಗಳ ನಿರ್ಮಾಣ, ಗಡಿ ಠಾಣೆಗಳ ನಿರ್ಮಾಣ ಸೇರಿದಂತೆ ಭೌತಿಕ ಮೂಲಸೌಕರ್ಯಗಳ ಸೃಷ್ಟಿ ಮಾಡಲಾಗಿದೆ ಎಂದು ಗೃಹ ಸಚಿವಾಲಯ ಲೋಕಸಭೆಯಲ್ಲಿ ಪರ್ವೇಶ್ ಸಾಹಿಬ್ ಸಿಂಗ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದೆ.
ಗಡಿ ಕಾವಲು ಪಡೆಗಳು ನಿಯಮಿತವಾಗಿ ಗಸ್ತು ತಿರುಗುವುದು ಮತ್ತು ವೀಕ್ಷಣಾ ಠಾಣೆಗಳನ್ನು ಹಾಕುವುದು ಅಕ್ರಮ ಒಳನುಸುಳುವಿಕೆಯನ್ನು ತಡೆಯಲು ಸುರಂಗ ನಿರ್ಮಾಣ ಮಾಡದಂತೆ ತಡೆಯುವುದೂ ಸೇರಿ ಅನೇಕ ವಿಧದ ಕಾರ್ಯ ಮಾಡಲಾಗಿದೆ ಎಂದು ಲಿಖಿತ ಉತ್ತರದಲ್ಲಿ ವಿವರಿಸಿದೆ.ಆದಾಗ್ಯೂ, ಕೆಲವು ಅಕ್ರಮ ವಲಸಿಗರು ಇನ್ನೂ ರಹಸ್ಯವಾಗಿ ಭಾರತಕ್ಕೆ ಪ್ರವೇಶಿಸಲು ಸಮರ್ಥರಾಗುತಿದ್ದಾರೆ.ಮುಖ್ಯವಾಗಿ ದೀರ್ಘ ಅಂತರರಾಷ್ಟ್ರೀಯ ಗಡಿಗಳಿರುವ ಕೆಲವು ಭಾಗಗಳಲ್ಲಿ ಕಷ್ಟಕರವಾದ ಪರ್ವತ ಮತ್ತು ನದಿಗಳಿರುವ ಕಾರಣ ಪರಿಶೀಲನೆ ಕಠಿಣವಾಗಿದೆ.
ಅಂತಹ ಅಕ್ರಮ ವಲಸಿಗರನ್ನು ಪತ್ತೆ ಮಾಡಲು ವಿದೇಶಿಯರ ಕಾಯ್ದೆ 1946 ರ ಸೆಕ್ಷನ್ 3 ರ ಅಡಿಯಲ್ಲಿ ಕೇಂದ್ರ ಸರ್ಕಾರದ ಅಧಿಕಾರವನ್ನುಪಡೆದು ಅಕ್ರಮ ವಿದೇಶಿ ಪ್ರಜೆಗಳನ್ನು ಬಂಧಿಸಲು ಮತ್ತು ಗಡೀಪಾರು ಮಾಡಲುಕ್ರಮ ಜರುಗಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Amit Shahಅಮಿತ್ ಶಾIllegal immigrantsಅಕ್ರಮ ವಲಸಿಗರುRohingyasBangladeshis in Indiaಭಾರತದಲ್ಲಿ ಬಾಂಗ್ಲಾದೇಶಿಗಳುರೋಹಿಂಗ್ಯಾಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


