ದೇಶ

ಕಾಂಗ್ರೆಸ್, ಎನ್ ಸಿಪಿ ಶಾಸಕರು ಶೀಘ್ರ ಬಿಜೆಪಿ ಸೇರ್ಪಡೆ: ಮಹಾ ಬಿಜೆಪಿ ಮುಖ್ಯಸ್ಥ

ಇನ್ನು ಒಂದು ವಾರ ಅಥವಾ 10 ದಿನಗಳಲ್ಲಿ ಕಾಂಗ್ರೆಸ್ ಹಾಗೂ ಎನ್ ಸಿಪಿಯ ಕೆಲ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ...

ಕಾಂಗ್ರೆಸ್, ಎನ್ ಸಿಪಿ ಶಾಸಕರು ಶೀಘ್ರ ಬಿಜೆಪಿ ಸೇರ್ಪಡೆ: ಮಹಾ ಬಿಜೆಪಿ ಮುಖ್ಯಸ್ಥ
ಚಂದ್ರಕಾಂತ್ ಪಾಟೀಲ್
Published On :
ಸೋಲಾಪುರ್: ಇನ್ನು ಒಂದು ವಾರ ಅಥವಾ 10 ದಿನಗಳಲ್ಲಿ ಕಾಂಗ್ರೆಸ್ ಹಾಗೂ ಎನ್ ಸಿಪಿಯ ಕೆಲ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮಹರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.
ಇಂದು ಸೋಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾಟೀಲ್ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿಯ ಹಲವು ಶಾಸಕರು ಒಂದು ವಾರದಲ್ಲಿ ರಾಜೀನಾಮೆ ನೀಡಲಿದ್ದಾರೆ ಎಂದರು.
ಬಿಜೆಪಿ ಸೇರಲಿರುವ ಶಾಸಕರ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಡದ ಬಿಜೆಪಿ ರಾಜ್ಯಾಧ್ಯಕ್ಷ, ಮುಂಬರುವ ದಿನಗಳಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರು ಸಹ ಬಿಜೆಪಿ ಸೇರಿದರೆ ಅಚ್ಚರಿ ಪಡಬೇಕಿಲ್ಲ ಎಂದಿದ್ದಾರೆ.
ಇನ್ನು ಪಾಟೀಲ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಎನ್ ಸಿಪಿ, ಪ್ರತಿಪಕ್ಷಗಳ ಕ್ಯಾಂಪ್ ನಲ್ಲಿ ಗೊಂದಲ ಸೃಷ್ಟಿಸಲು ಅವರು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.