ಶೀಲಾ ದೀಕ್ಷಿತ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಸೇರಿ ಹಲವು ಗಣ್ಯರ ಸಂತಾಪ
ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮೂರು ಬಾರಿ ರಾಷ್ಟ್ರ ರಾಜಧಾನಿ ದೆಹಲಿಯ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ

Published On :
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮೂರು ಬಾರಿ ರಾಷ್ಟ್ರ ರಾಜಧಾನಿ ದೆಹಲಿಯ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ನಿರ್ಗಮಿತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ದೆಹಲಿ ಮಾಜಿ ಸಿಎಂ ನಿಧನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹಾಗೂ ಬಾಲಿವಡ್ ನಟ ಅಕ್ಷಯ್ ಕುಮಾರ್ ಸಹ ಕಂಬನಿ ಮಿಡಿದಿದ್ದಾರೆ.
ದೆಹಲಿಯ ಸರ್ವಾಂಗೀಣ ಅಭಿವೃದ್ಧಿಗೆ ಶೀಲಾ ದೀಕ್ಷಿತ್ ಅವರ ಪಾತ್ರ ಹಿರಿದು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ದುಃಖ ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಕಾಂಗ್ರೆಸ್ ಪಕ್ಷದ ಪ್ರೀತಿಯ ಪುತ್ರಿ ಅವರ ಅಗಲಿಕೆ ಸಹಿಸಲಾಗದ ನೋವನ್ನು ತಂದಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
“ನನಗೆ ಅತ್ಯಂತ ಆಪ್ತರಾಗಿದ್ದ ಶೀಲಾ ದೀಕ್ಷಿತ್ ಸಾವಿನ ಸುದ್ದಿ ಆಘಾತವನ್ನುಂಟು ಮಾಡಿದೆ. ಮೂರು ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿದ್ದ ಅವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನಾಗರಿಕರು ಹಾಗೂ ಅವರ ಕುಟುಂಬ ಸದಸ್ಯರಿಗೆ ಸಿಗಲಿ” ಎಂದು ಟ್ವಿಟರ್ ಮೂಲಕ ರಾಹುಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಶೀಲಾ ದೀಕ್ಷಿತ್ ಅವರು ರಾಹುಲ್ ಗಾಂಧಿ ಮಾತ್ರವಲ್ಲದೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೂ ಅತ್ಯಾಪ್ತರೆನಿಸಿದ್ದರು.
ನೂತನ ಸಂಸದ ಗೌತಮ್ ಗಂಭೀರ್, ಬಿಜೆಪಿ ದಿಲ್ಲಿ ಅಧ್ಯಕ್ಷ ಮನೋಜ್ ತಿವಾರಿ, ಕೇಂದ್ರ ಗೃಹಸಚಿವ ರಾಜ್‌ನಾಥ್ ಸಿಂಗ್, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಟ್ವೀಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


