ಕೇಂದ್ರ ಸಚಿವ ಬಲಿಯಾನ್ ಗೆ ಎಚ್ಚರಿಕೆ ಕೊಟ್ಟ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಸಂಸತ್ತಿನ ಕಲಾಪದಲ್ಲಿ ಹಾಜರಾಗದೆ ಸಮಯ ವ್ಯರ್ಥಗೊಳಿಸಿದ್ದಕ್ಕಾಗಿ ಕೇಂದ್ರ ಪಶುಸಂಗೋಪನಾ ಅಭಿವೃದ್ಧಿ ಖಾತೆ ರಾಜ್ಯ ಸಚಿವ ಸಂಜೀವ್ ಕುಮಾರ್ ಬಲಿಯಾನ್...

Published On :
ನವದೆಹಲಿ: ಸಂಸತ್ತಿನ ಕಲಾಪದಲ್ಲಿ ಹಾಜರಾಗದೆ ಸಮಯ ವ್ಯರ್ಥಗೊಳಿಸಿದ್ದಕ್ಕಾಗಿ ಕೇಂದ್ರ ಪಶುಸಂಗೋಪನಾ ಅಭಿವೃದ್ಧಿ ಖಾತೆ ರಾಜ್ಯ ಸಚಿವ ಸಂಜೀವ್ ಕುಮಾರ್ ಬಲಿಯಾನ್ ವಿರುದ್ಧ ಉಪರಾಷ್ಟ್ರಪತಿಯೂ ಆಗಿರುವ ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯ ನಾಯ್ಡು ಶುಕ್ರವಾರ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮತ್ತೊಮ್ಮೆ, ಇಂತಹ ತಪ್ಪು ಆಗಬಾರದು ಎಂದು ಎಚ್ಚರಿಕೆ ನೀಡಿದರು. ಬುಧವಾರ ರಾಜ್ಯಸಭೆಯ ಕಾರ್ಯಸೂಚಿಯಲ್ಲಿ ಸಚಿವ ಬಲಿಯಾನ್ ಅವರ ಹೆಸರಿದ್ದರೂ ಅಂದು ಅವರು ಸದನಕ್ಕೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಶುಕ್ರವಾರ ಸಭಾಪತಿ ವೆಂಕಯ್ಯ ನಾಯ್ಡು ಅವರು ಸಚಿವರನ್ನು ಉದ್ದೇಶಿಸಿ, ಸಚಿವರೇ ಬುಧವಾರದ ಕಾರ್ಯಸೂಚಿಯಲ್ಲಿ ನಿಮ್ಮ ಹೆಸರಿತ್ತು, ಆದರೆ ನೀವು ಹಾಜರಿರಲಿಲ್ಲ, ಇನ್ನೂ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು. ಸಚಿವ ಬಲಿಯಾನ್ ತಮ್ಮ ಗೈರುಹಾಜರಿಗೆ ವಿಷಾದ ವ್ಯಕ್ತಪಡಿಸಿ, ಇನ್ನೂಮುಂದೆ ಈ ರೀತಿ ಆಗುವುದಿಲ್ಲ ಎಂದು ಭರವಸೆ ನೀಡಿದರು.
ಸಂಸತ್ ಅಧಿವೇಶನಗಳಿಗೆ ಗೈರಾಗುವ ಸಚಿವರು, ಸಂಸದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


