ಅಮರಾವತಿ ಅಭಿವೃದ್ಧಿಗೆ ವಿಘ್ನ: ಚಂದ್ರಬಾಬು ನಾಯ್ಡು ಕನಸಿನ ಯೋಜನೆಗೆ ವಿಶ್ವಬ್ಯಾಂಕ್ ಸಾಲ ನೀಡಲ್ಲ!
ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರ ಕನಸಿನ ಯೋಜನೆ ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ಸುಸ್ಥಿರ ಮೂಲಸೌಕರ್ಯ ಮತ್ತು ಸಾಂಸ್ಥಿಕ ಅಭಿವೃದ್ಧಿ ಯೋಜನೆಗೆ ಹಣ ಒದಗಿಸುವುದನ್ನು...

Published On :
ಹೈದರಾಬಾದ್: ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರ ಕನಸಿನ ಯೋಜನೆ ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ಸುಸ್ಥಿರ ಮೂಲಸೌಕರ್ಯ ಮತ್ತು ಸಾಂಸ್ಥಿಕ ಅಭಿವೃದ್ಧಿ ಯೋಜನೆಗೆ ಹಣ ಒದಗಿಸುವುದನ್ನು ವಿಶ್ವಬ್ಯಾಂಕ್ ಕೈಬಿಟ್ಟಿದೆ.
ಕೇಂದ್ರ ಸರ್ಕಾರ ಎರಡು ಸಾವಿರ ಕೋಟಿ ರೂ. ಸಾಲ ಪ್ರಸ್ತಾವನೆಯ ಅರ್ಜಿಯನ್ನು ಹಿಂತೆಗೆದುಕೊಂಡ ನಂತರ ವಿಶ್ವಬ್ಯಾಂಕ್ ಈ ನಿರ್ಧಾರಕ್ಕೆ ಬಂದಿದೆ. ಬಲವಂತದ ಭೂ ಸ್ವಾಧೀನದಂತಹ ಅಕ್ರಮಗಳ ಕುರಿತಾದ ದೂರುಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಲು ವಿಶ್ವ ಬ್ಯಾಂಕ್ ಕೇಂದ್ರದಿಂದ ಅನುಮತಿ ಕೋರಿತು. ಆದರೆ ಕೇಂದ್ರ ಸರ್ಕಾರವು ಅದಕ್ಕೆ ಅನುಮತಿ ನೀಡುವ ಬದಲು ಸಾಲ ಪ್ರಸ್ತಾವನೆಯ ಅರ್ಜಿಯನ್ನೇ ಹಿಂತೆಗೆದುಕೊಂಡಿತ್ತು.
ತೆಲಂಗಾಣ ವಿಭಜನೆ ಬಳಿಕ ಆಂಧ್ರಪ್ರದೇಶಕ್ಕಾಗಿ ಅಮರಾವತಿಯಲ್ಲಿ ನೂತನ ರಾಜಧಾನಿಯನ್ನು ನಿರ್ಮಿಸುವುದು ಚಂದ್ರಬಾಬು ನಾಯ್ಡು ಅವರ ಕನಸಿನ ಯೋಜನೆಯಾಗಿತ್ತು. ಈ ಯೋಜನೆಗೆ ಅಂದಾಜು 1 ಲಕ್ಷ ಕೋಟಿ ರೂ.ಗಳ ಹಣಕಾಸನ್ನು ನಿರೀಕ್ಷಿಸಲಾಗಿತ್ತು. ಇದೀಗ ವಿಶ್ವಬ್ಯಾಂಕ್ ಸಾಲ ನೀಡಲು ನಿರಾಕರಿಸಿರುವುದು ನೂತನ ಸರ್ಕಾರ ವೈಎಸ್ ಆರ್ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆಯಾಗುವುದಿಲ್ಲ ಎಂದು ರಾಜ್ಯಸಭಾ ಸದಸ್ಯ ವಿಜಯ್ ಸಾಯಿ ರೆಡ್ಡಿ ತಿಳಿಸಿದ್ದಾರೆ.
ಜಗನ್ ನೇತೃತ್ವದ ನೂತನ ಸರ್ಕಾರಕ್ಕೆ ವಿಶ್ವಬ್ಯಾಂಕ್ ನಿಂದ ಸಾಲಕ್ಕೆ ಹೊಸದಾಗಿ ಅರ್ಜಿ ಸಲ್ಲಿಸುವ ಅವಕಾಶವಿದೆ ಎಂದು ವಿಜಯ್ ಸಾಯಿ ರೆಡ್ಡಿ ಹೇಳಿದ್ದಾರೆ.
ಅಮರಾವತಿಯಲ್ಲಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಸರ್ಕಾರ ಕಿತ್ತುಕೊಳ್ಳುತ್ತಿದೆ ಎಂದು ರೈತರು ದೂರು ದಾಖಲಿಸಿದ್ದು ಇದನ್ನು ವಿರೋಧಿಸಿ ಅನೇಕ ಎನ್ಜಿಒಗಳು ಹಾಗೂ ಪರಿಸರವಾದಿಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
TDPChandrababu NaiduಟಿಡಿಪಿWorld Bankವಿಶ್ವಬ್ಯಾಂಕ್ಚಂದ್ರಬಾಬು ನಾಯ್ಡುAmaravati CapitalCity projectಅಮರಾವತಿ ರಾಜಧಾನಿನಗರ ಯೋಜನೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


