ದೇಶ

ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಜೀವದ ಹಂಗು ತೊರೆದು ರಕ್ಷಿಸಿದ ಪೊಲೀಸ್, ವಿಡಿಯೋ ವೈರಲ್!

ಭಾರತದ ಪವಿತ್ರ ನದಿ ಗಂಗೆ ಮೈದುಂಬಿ ಹರಿಯುತ್ತಿದ್ದು ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯೊರ್ವನನ್ನು ರಕ್ಷಿಸಲು ಪೊಲೀಸ್ ಪೇದೆಯೊಬ್ಬರು ತಮ್ಮ ಜೀವದ ಹಂಗು ತೊರೆದು...

ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಜೀವದ ಹಂಗು ತೊರೆದು ರಕ್ಷಿಸಿದ ಪೊಲೀಸ್, ವಿಡಿಯೋ ವೈರಲ್!
ಸಂಗ್ರಹ ಚಿತ್ರ
Published On :
ಭಾರತದ ಪವಿತ್ರ ನದಿ ಗಂಗೆ ಮೈದುಂಬಿ ಹರಿಯುತ್ತಿದ್ದು ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯೊರ್ವನನ್ನು ರಕ್ಷಿಸಲು ಪೊಲೀಸ್ ಪೇದೆಯೊಬ್ಬರು ತಮ್ಮ ಜೀವದ ಹಂಗು ತೊರೆದು ನದಿಗೆ ಹಾರಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹರಿದ್ವಾರದ ಕಾಂಗ್ರಾ ಘಾಟ್ ಬಳಿ ಹರಿಯಾಣ ಮೂಲದ ವಿಶಾಲ್ ಎಂಬಾತ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದ್ದಾನೆ. ಈ ವೇಳೆ ಅಲ್ಲೆ ಇದ್ದ ಪೊಲೀಸ್ ಪೇದೆಯೊಬ್ಬರು ನದಿಗೆ ಹಾರಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪೊಲೀಸ್ ಪೇದೆಯ ಕರ್ತವ್ಯವನ್ನು ನೆಟಿಗರು ಪ್ರಶಂಸಿಸಿದ್ದಾರೆ.
ಈ ವಿಡಿಯೋವನ್ನು ಉತ್ತರಖಂಡ್ ಪೊಲೀಸರು ತಮ್ಮ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋವನ್ನು ಹಲವರು ಶೇರ್ ಮಾಡುತ್ತಾ ಪೊಲೀಸ್ ಪೇದೆಗೆ ಭೇಷ್ ಅಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.