ದೇಶ

ರೈಲಿನಲ್ಲೂ ಇನ್ನು ಮುಂದೆ ಬಯೋಮೆಟ್ರಿಕ್ ವ್ಯವಸ್ಥೆ: ಪ್ರಯಾಣಿಕರಿಗೆ ಇದರಿಂದ ಏನು ಪ್ರಯೋಜನ? ಇಲ್ಲಿದೆ ಮಾಹಿತಿ

ರೈಲಿನ ಸಾಮಾನ್ಯ ವಿಭಾಗದಲ್ಲೂ ಇನ್ನು ಮುಂದೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಯಾಗಲಿದ್ದು, ದೀರ್ಘಾವಧಿ ರೈಲು ಪ್ರಯಾಣ ಮಾಡುವವರಿಗೆ ಇದು ಉಪಯೋಗವಾಗಲಿದೆ.

ರೈಲಿನಲ್ಲೂ  ಇನ್ನು ಮುಂದೆ ಬಯೋಮೆಟ್ರಿಕ್ ವ್ಯವಸ್ಥೆ: ಪ್ರಯಾಣಿಕರಿಗೆ ಇದರಿಂದ ಏನು ಪ್ರಯೋಜನ? ಇಲ್ಲಿದೆ ಮಾಹಿತಿ
ರೈಲಿನಲ್ಲೂ ಇನ್ನು ಮುಂದೆ ಬಯೋಮೆಟ್ರಿಕ್ ವ್ಯವಸ್ಥೆ: ಪ್ರಯಾಣಿಕರಿಗೆ ಇದರಿಂದ ಏನು ಪ್ರಯೋಜನ? ಇಲ್ಲಿದೆ ಮಾಹಿತಿ
Published On :
ನವದೆಹಲಿ: ರೈಲಿನ ಸಾಮಾನ್ಯ ವಿಭಾಗದಲ್ಲೂ ಇನ್ನು ಮುಂದೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಯಾಗಲಿದ್ದು, ದೀರ್ಘಾವಧಿ ರೈಲು ಪ್ರಯಾಣ ಮಾಡುವವರಿಗೆ ಇದು ಉಪಯೋಗವಾಗಲಿದೆ. 
ರೈಲ್ವೆ ಇಲಾಖೆ ದೂರ ಪ್ರಯಾಣ ಮಾಡುವ ರೈಲುಗಳಿಗೆ ಈ ರೀತಿಯ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಪರೀಕ್ಷೆ ಮಾಡಲಾಗಿದೆ. ಸಾಮಾನ್ಯ ಬೋಗಿಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರುವುದರಿಂದ ಮೊದಲು ಬಂದವರಿಗೆ ಮೊದಲು ಆಸನ ಸಿಗಲಿದೆ. 
ಸಾಮಾನ್ಯ ಬೋಗಿಗಳಲ್ಲಿ ಸಂಚರಿಸುವಾಗ ನೂಕು-ನುಗ್ಗಲು ಉಂಟಾಗುವುದು ಸಾಮಾನ್ಯವಾಗಿ ಕಂಡುಬರುವ ದೃಶ್ಯ. ಒಮ್ಮೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಿದರೆ ಇಂತಹ ಸ್ಥಿತಿಯನ್ನು ಸುಧಕರಣೆ ಮಾಡಬಹುದೆಂಬುದು ರೈಲ್ವೆ ಇಲಾಖೆಯ ಉದ್ದೇಶವಾಗಿದೆ. 
ಮುಂಬೈ ನ ಛತ್ರಪತಿ ಶಿವಾಜಿ ಟರ್ಮಿನಸ್ ನಿಂದ ಲಖನೌ ಕೇಂದ್ರದ ವರೆಗೆ ಸಂಚರಿಸುವ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಾಯೋಗಿಕವಾಗಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಪರೀಕ್ಷಿಸಲಾಗಿದೆ. 
ಯಾವುದೇ ವ್ಯಕ್ತಿ ರೈಲ್ವೆ ನಿಲ್ದಾಣದಲ್ಲಿ ಆಗಮಿಸುತ್ತಿದ್ದಂತೆಯೇ ಬಯೋಮೆಟ್ರಿಕ್ ಯಂತ್ರದ ಮೂಲಕ ತಾವು ತೆರಳುತ್ತಿರುವ ರೈಲಿಗೆ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ಒಮ್ಮೆ ನೋಂದಣಿ ಮಾಡಿಕೊಂಡರೆ ರೈಲಿನ ಸಾಮಾನ್ಯ ಬೋಗಿಯಲ್ಲಿ ಆ ವ್ಯಕ್ತಿಗೆ ಆಸನ ವ್ಯವಸ್ಥೆಯನ್ನು ಕಾಯ್ದಿರಿಸಲಾಗುತ್ತದೆ. ಈ ರೀತಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಯಾಗುವುದರಿಂದ ಸಾಮಾನ್ಯ ಬೋಗಿಗಳಲ್ಲಿ ಅತಿ ಹೆಚ್ಚಿನ ಜನಸಂದಣಿಯನ್ನೂ ತಡೆಗಟ್ಟಬಹುದಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.