ಅಂತಾರಾಜ್ಯ ಗಡಿಗಳಲ್ಲಿ ಜಂಟಿ ಕಾರ್ಯಾಚರಣೆಯಿಂದ ಮಾದಕ ವಸ್ತು ಸಾಗಣೆ ತಡೆ ಸಾಧ್ಯ- ಪಂಜಾಬ್ ಮುಖ್ಯಮಂತ್ರಿ
ಅಂತಾರಾಜ್ಯ ಗಡಿಗಳಲ್ಲಿ ಜಂಟಿ ಕಾರ್ಯಾಚರಣೆಯಿಂದ ಮಾದಕ ವಸ್ತು ಸಾಗಣೆಯನ್ನು ತಡೆಗಟ್ಟಬಹುದು ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

Published On :
ಚಂಡೀಗಢ: ಅಂತಾರಾಜ್ಯ ಗಡಿಗಳಲ್ಲಿ ಜಂಟಿ ಕಾರ್ಯಾಚರಣೆಯಿಂದ ಮಾದಕ ವಸ್ತು ಸಾಗಣೆಯನ್ನು ತಡೆಗಟ್ಟಬಹುದು ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
ಮಾದಕ ವಸ್ತು ನಿಯಂತ್ರಣ ಮತ್ತು ಸವಾಲುಗಳು ಕುರಿತು ಎರಡನೇ ಪ್ರಾದೇಶಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮಾದಕ ವಸ್ತು ನಿಯಂತ್ರಣಕ್ಕಾಗಿ ಕ್ರಿಯಾ ಯೋಜನೆ ಹಾಗೂ ಸಮಗ್ರ ಕಾರ್ಯತಂತ್ರ ಕುರಿತು ವಿವರಿಸಿದರು.
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.
ಭಾರತದಲ್ಲಿ ತೊಂದರೆ ಉಂಟುಮಾಡುವ ನಿಟ್ಟಿನಲ್ಲಿ ಉರಿ, ಕಾಂದ್ಲಾ ಮತ್ತಿತರ ಕಡೆಗಳಿಂದ ಮಾದಕವಸ್ತುವನ್ನು ಸಾಗಿಸುತ್ತಿರುವ ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರಚೋದಿಸುತ್ತಿದೆ. ಯಾವುದೇ ರಾಜ್ಯ ಏಕಾಂಗಿಯಾಗಿ ಮಾದಕ ವಸ್ತು ಸಾಗಣೆಯನ್ನು ತಡಗೆಟ್ಟಲು ಸಾಧ್ಯವಿಲ್ಲ, ಎಲ್ಲ ರಾಜ್ಯಗಳು ಒಗ್ಗೂಡಿ ಇದರ ಸಾಗಣೆಯನ್ನು ನಿಯಂತ್ರಿಸಬಹುದು ಎಂದು ಅಭಿಪ್ರಾಯಪಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PunjabDrug menaceCM Captain Amarinder Singhಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್Inter State Operation ಪಂಜಾಬ್ಮಾದಕ ವಸ್ತು ನಿಯಂತ್ರಣಅಂತಾರಾಜ್ಯ ಕಾರ್ಯಾಚರಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


