ಹಬ್ಬ, ಆಚರಣೆಗಳ ಋತುವನ್ನು ನೀರಿನ ಸಂರಕ್ಷಣೆ ಮಹತ್ವ ಸಾರಲು ಏಕೆ ಬಳಸಿಕೊಳ್ಳಬಾರದು: ಪಿಎಂ ನರೇಂದ್ರ ಮೋದಿ
ಇನ್ನು ಹಬ್ಬಗಳ ಸಮಯ. ಭಾರತದ ಹಲವು ಹಬ್ಬ ಹರಿದಿನಗಳನ್ನು ಈ ಋತುವಿನಲ್ಲಿ ಆಚರಿಸಲಾಗುತ್ತದೆ. ಈ ...

Published On :
ನವದೆಹಲಿ: ಇನ್ನು ಹಬ್ಬಗಳ ಸಮಯ. ಭಾರತದ ಹಲವು ಹಬ್ಬ ಹರಿದಿನಗಳನ್ನು, ರಾಷ್ಟ್ರೀಯ ಆಚರಣೆಗಳನ್ನು ಈ ಋತುವಿನಲ್ಲಿ ಶ್ರಾವಣ ಮಾಸದಲ್ಲಿ ಆಚರಣೆ ಮಾಡಲಾಗುತ್ತದೆ. ಈ ಹಬ್ಬಗಳ ಋತುವನ್ನು ನೀರಿನ ಸಂರಕ್ಷಣೆಯ ಸಂದೇಶವನ್ನು ಸಾರಲು ಏಕೆ ಬಳಸಿಕೊಳ್ಳಬಾರದು ಎಂದು ಮಹತ್ವವಾದ ವಿಚಾರವನ್ನು ಪ್ರಧಾನ ಮಂತ್ರಿ ದೇಶದ ಜನತೆ ಮುಂದಿಟ್ಟಿದ್ದಾರೆ.
ತಮ್ಮ ಜನಪ್ರಿಯ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಇಂದು ಮಾತನಾಡಿದ ಪ್ರಧಾನಿ, ಜಲ ನೀತಿಯನ್ನು ರೂಪಿಸಿದ ಮೊದಲ ರಾಜ್ಯ ಮೇಘಾಲಯ. ಇದಕ್ಕಾಗಿ ನಾನು ಮೇಘಾಲಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ನೀರಿನ ಸಮಸ್ಯೆಯಿರುವ ಹರ್ಯಾಣದಂತಹ ರಾಜ್ಯಗಳಲ್ಲಿ ಅಲ್ಪ ನೀರಿನ ಅವಶ್ಯಕತೆಯಿರುವ ಬೆಳೆ ಬೆಳೆಯಲು ಜನರನ್ನು ಉತ್ತೇಜಿಸಲಾಗುತ್ತದೆ. ಈ ಮೂಲಕ ರೈತರು ನೀರಿನ ಕೊರತೆಯಿಂದ ಬೆಳೆ ನಷ್ಟ ಹೊಂದುವುದನ್ನು ತಪ್ಪಿಸಬಹುದು ಎಂದರು.
ಅಂತರಿಕ್ಷ ಯಾನದಲ್ಲಿ ಆಕಾಶಕ್ಕಿಂತ ಮಿಗಿಲಾಗಿ ಭಾರತ ಸಾಧನೆ ಮಾಡುತ್ತಿದ್ದು ಈ ವಿಚಾರದಲ್ಲಿ ಭಾರತೀಯರೆಲ್ಲರೂ ಹೆಮ್ಮೆ ಪಡುತ್ತಾರೆ ಎಂಬ ಬಲವಾದ ನಂಬಿಕೆ ನನಗಿದೆ ಎಂದರು.
ಮೊದಲ ಬಾರಿಗೆ ಹಿನ್ನಡೆ ಕಂಡುಬಂದರೂ ಕೂಡ ನಂತರ ಚಂದ್ರಯಾನ-2ನ್ನು ಯಶಸ್ವಿಯಾಗಿ ಉಡಾಯಿಸಿದ್ದು ಇಸ್ರೊ ವಿಜ್ಞಾನಿಗಳ ಅಭೂತಪೂರ್ವ ಸಾಧನೆಯಾಗಿದೆ ಎಂದು ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಕೊಂಡಾಡಿದರು.
ಚಂದ್ರಯಾನ-2 ಸಂಪೂರ್ಣ ಸ್ವದೇಶಿ ನಿರ್ಮಿತ ಬಾಹ್ಯಾಕಾಶ ಯೋಜನೆ. ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಜ್ಞ್ಯಾನ್ ಸೆಪ್ಟೆಂಬರ್ ನಲ್ಲಿ ಚಂದ್ರನ ಮೇಲ್ಮೈ ಮೇಲೆ ಸುಗಮವಾಗಿ ಇಳಿಯುವುದನ್ನು ನೋಡಲು ನಾವೆಲ್ಲರೂ ಕಾತರರಾಗಿದ್ದೇವೆ ಎಂದರು.
ದೇಶದ ವಿವಿಧ ಭಾಗಗಳಲ್ಲಿ ಸಾಕಷ್ಟು ಮಳೆಯಾಗಿದ್ದು, ಇನ್ನು ಹಲವೆಡೆ ಪ್ರವಾಹ ಉಂಟಾಗಿದೆ. ಪ್ರವಾಹ ಪೀಡಿತರ ರಕ್ಷಣೆ ಮತ್ತು ಪರಿಹಾರವನ್ನು ತ್ವರಿತವಾಗಿ ಒದಗಿಸಲು ರಾಜ್ಯ ಸರ್ಕಾರಗಳೊಂದಿಗೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಶಾಲಾ ಮಕ್ಕಳಿಗಾಗಿ ಬಾಹ್ಯಾಕಾಶ ವಿಜ್ಞಾನ ಕುರಿತ ಕ್ವಿಜ್
ಬಾಹ್ಯಾಕಾಶ ವಿಜ್ಞಾನ ಕುರಿತು ಶಾಲಾ ಮಕ್ಕಳಿಗಾಗಿ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. mygov.in ವೆಬ್ಸೈಟ್ ಮೂಲಕ ಈ ಕ್ವಿಜ್ ಅನ್ನು ನಡೆಸಲಾಗುತ್ತದೆ. ಈ ಕ್ವಿಜ್ನಲ್ಲಿ ಗರಿಷ್ಠ ಅಂಕಗಳಿಸುವ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ನಲ್ಲಿ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಮತ್ತು ಪ್ರಜ್ಞಾನ್ ರೋವರ್ ಇಳಿಯುವ ಸಂದರ್ಭದಲ್ಲಿ ಶ್ರೀಹರಿಕೋಟಕ್ಕೆ ಕರೆದೊಯ್ದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿಸಲಾಗುವುದು ಎಂದು ಹೇಳಿದರು.
ಕ್ಯಾನ್ಸರ್ ಗೆದ್ದು, ಕ್ರೀಡಾ ಕೂಟದಲ್ಲಿ ಪದಕಕ್ಕೆ ಕೊರಳೊಡ್ಡಿದ ಪುಟಾಣಿಗಳಿಗೆ ಅಭಿನಂದನೆ:
ಸಣ್ಣ ವಯಸ್ಸಿನಲ್ಲೇ ಕ್ಯಾನ್ಸರ್ಗೆ ತುತ್ತಾಗಿ, ಅದರ ವಿರುದ್ಧ ಹೋರಾಡಿ ಗೆದ್ದ ಭಾರತದ 10 ಮಕ್ಕಳನ್ನು ಪ್ರಧಾನಿ ನರೇಂದ್ರ ಮೋದಿ ಮನಃಪೂರ್ವಕವಾಗಿ ಅಭಿನಂದಿಸಿದರು. ರಷ್ಯಾದ ಮಾಸ್ಕೋದಲ್ಲಿ ಇಂತಹ ಮಕ್ಕಳಿಗಾಗಿ ನಡೆದ ಜಾಗತಿಕ ಕ್ರೀಡಾಕೂಟದಲ್ಲಿ ಪದಕಗಳನ್ನು ಗೆದ್ದು ರಾಷ್ಟ್ರದ ಕೀರ್ತಿಪತಾಕೆಯನ್ನು ಎತ್ತಿಹಿಡಿದಿರುವುದಕ್ಕೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


