ದೇಶ

ಕರ್ನಾಟಕ ಆಪರೇಷನ್ ಸಕ್ಸಸ್: ಮಹಾರಾಷ್ಟ್ರದ ಕಾಂಗ್ರೆಸ್, ಎನ್‌ಸಿಪಿಯ 50 ಶಾಸಕರು ಸದ್ಯವೇ ಬಿಜೆಪಿಗೆ ಸೇರ್ಪಡೆ?

ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ 5 ವರ್ಷಗಳ ಕಾಲ ಸುಭದ್ರ ಸರ್ಕಾರ ನೀಡಿದ್ದು ಇದೇ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು...

ಕರ್ನಾಟಕ ಆಪರೇಷನ್ ಸಕ್ಸಸ್: ಮಹಾರಾಷ್ಟ್ರದ ಕಾಂಗ್ರೆಸ್, ಎನ್‌ಸಿಪಿಯ 50 ಶಾಸಕರು ಸದ್ಯವೇ ಬಿಜೆಪಿಗೆ ಸೇರ್ಪಡೆ?
ರಾಹುಲ್ ಗಾಂಧಿ-ಶರದ್ ಪವಾರ್
Published On :
ಮುಂಬೈ: ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ 5 ವರ್ಷಗಳ ಕಾಲ ಸುಭದ್ರ ಸರ್ಕಾರ ನೀಡಿದ್ದು ಇದೇ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಮತ್ತು ಎನ್‌ಸಿಪಿಯ 50 ಶಾಸಕರು ಸದ್ಯವೇ ಬಿಜೆಪಿಗೆ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎಂದು ಸಚಿವರೊಬ್ಬರು ಆರೋಪಿಸಿದ್ದಾರೆ.
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಅವರು ಬಿಜೆಪಿಯು ಪ್ರತಿಪಕ್ಷಗಳ ಶಾಸಕರನ್ನು ಖರೀದಿಸುತ್ತಿದೆ ಎಂದು ಆರೋಪ ಮಾಡಿದ್ದ ಬೆನ್ನಲ್ಲೇ ಇದೀಗ ಹಿರಿಯ ಸಚಿವ ಗಿರೀಶ್ ಮಹಾಜನ್ ಅವರು ಬಿಜೆಪಿ 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಎನ್‌ಸಿಪಿ ಶಾಸಕರನ್ನು ಸೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ. 
ಇನ್ನು ಒಂದೆರಡು ವಾರಗಳಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿ ತಲುಪಲಿದೆ. ಎನ್‌ಸಿಪಿಯೂ ದುರ್ಬಲಗೊಂಡಿದೆ. ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್ ಮತ್ತು ಎನ್‌ಸಿಪಿಗೆ ಅಸ್ತಿತ್ವದ ಪ್ರಶ್ನೆ ಎದುರಾಗಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.