ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ: ಬಿಜೆಪಿ ಶಾಸಕನ ವಿರುದ್ಧ ಕೊಲೆ ಯತ್ನ ಕೇಸ್ ದಾಖಲು
ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ವಕೀಲರು ಪ್ರಯಾಣಿಸುತ್ತಿದ್ದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದ...

Published On :
ಲಖನೌ: ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ವಕೀಲರು ಪ್ರಯಾಣಿಸುತ್ತಿದ್ದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ವಿರುದ್ಧ ಕೊಲೆ ಯತ್ನ ಕೇಸ್ ದಾಖಲಿಸಲಾಗಿದೆ.
ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಯುವತಿ, ಆಕೆಯ ವಕೀಲ ಹಾಗೂ ಇಬ್ಬರು ಸಾಕ್ಷಿಗಳು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದರು.
ರಾಯಬರೇಲಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅತ್ಯಾಚಾರ ಸಂತ್ರಸ್ತೆ ಹಾಗೂ ವಕೀಲರನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಇಬ್ಬರು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಈ ಮಧ್ಯೆ ಪ್ರಾಥಮಿಕ ತನಿಖೆಯಲ್ಲಿ ಅದು ಅಪಘಾತ ಎಂದು ತಿಳಿದುಬಂದಿದೆ. ಆದರೂ ಆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಪ್ರಕರಣವನ್ನು ಸಿಬಿಐಗೆ ವಹಿಸಿಲು ಸಿದ್ಧ ಎಂದು ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ಒಪಿ ಸಿಂಗ್ ಅವರು ಹೇಳಿದ್ದಾರೆ.
ಅಪಘಾತದ ಬಳಿಕ, ಇದು ಅಪಘಾತ ಅಲ್ಲ ಅತ್ಯಾಚಾರ ಸಂತ್ರಸ್ತೆಯ ಕೊಲೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಆರೋಪಿಸಿದ್ದರು. ಅಲ್ಲದೆ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದರು.
ರಾಜಕೀಯವಾಗಿಯೂ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಎಡೆಮಾಡಿಕೊಟ್ಟಿದ್ದ ಉನ್ನಾವೊ ಆತ್ಯಾಚಾರ ಪ್ರಕರಣ, ಈಗ ಅಪಘಾತದ ಹಿಂದಿನ ಕೈವಾಡದ ಬಗ್ಗೆ ಹಲವು ಸಂಶಯಗಳಿಗೆ ಆಸ್ಪದ ಮಾಡಿಕೊಟ್ಟಿದೆ. ಇದರೊಂದಿಗೆ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಆರೋಪಿಯಾಗಿರುವ ಈ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು ಲಭಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


