ಆಗಸ್ಟ್ 8 ರಂದು ಪ್ರಣಬ್ ಮುಖರ್ಜಿಗೆ 'ಭಾರತರತ್ನ' ಪ್ರಶಸ್ತಿ ಪ್ರದಾನ: ವರದಿಗಳು
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಆಗಸ್ಟ್ 8 ರಂದು ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರದಾನ ಮಾಡಲಿದ್ದಾರೆ ಎಂದು ವರದಿಗಳು ಹೇಳಿವೆ.

Published On :
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಆಗಸ್ಟ್ 8 ರಂದು ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರದಾನ ಮಾಡಲಿದ್ದಾರೆ ಎಂದು ವರದಿಗಳು ಹೇಳಿವೆ.
ಅಂತೆಯೇ ಮರಣೋತ್ತರವಾಗಿ ಸಾಮಾಜಿಕ ಹೋರಾಟಗಾರ ನಾನಾಜಿ ದೇಶ್ ಮುಖ್ ಹಾಗೂ ಭೂಪೇನ್ ಹಜಾರಿಕಾ ಅವರಿಗೆ ಅಂದೇ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
2012ರಿಂದ 2017ರವರೆಗೂ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿದ ಪ್ರಣಬ್ ಮುಖರ್ಜಿ, 'ಪ್ರಣಬ್ ದಾ' ಎಂದು ಖ್ಯಾತರಾಗಿದ್ದಾರೆ. 83 ವರ್ಷದ ಪ್ರಣಬ್ ಮುಖರ್ಜಿ, ಕಾಂಗ್ರೆಸ್ ಪಕ್ಷದ ಸರ್ವಶ್ರೇಷ್ಠ ವ್ಯಕ್ತಿಯಾಗಿಯೂ ಹೆಸರಾಗಿದ್ದಾರೆ.
ಸರ್ವಪಲ್ಲಿ ರಾಧಾಕೃಷ್ಣನ್, ರಾಜೇಂದ್ರ ಪ್ರಸಾದ್, ಜಾಕೀರ್ ಹುಸೇನ್ ಮತ್ತು ವಿವಿ ಗಿರಿ ನಂತರ ಭಾರತ ರತ್ನ ಪ್ರಶಸ್ತಿ ಪಡೆದ ಮಾಜಿ ರಾಷ್ಟ್ರಪತಿಗಳ ಸಾಲಿನಲ್ಲಿ ಇದೀಗ ಪ್ರಣಬ್ ಮುಖರ್ಜಿಯೂ ಸೇರುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


