ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಿಯಾಂಕಾ ಗಾಂಧಿ ಸೂಕ್ತ ಆಯ್ಕೆ- ಪಂಜಾಬ್ ಮುಖ್ಯಮಂತ್ರಿ
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಗಾದಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಸೂಕ್ತ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

Published On :
ಚಂಡೀಗಡ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಗಾದಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಸೂಕ್ತ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಸೂಕ್ತರಾಗಿದ್ದಾರೆ.ಆದರೆ,ಇದೆಲ್ಲವೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತೀರ್ಮಾನವನ್ನು ಅವಲಂಬಿಸಿದೆ. ಈ ವಿಚಾರದಲ್ಲಿ ಅದೇ ಅಂತಿಮ ತೀರ್ಮಾನ ಕೈಗೊಳ್ಳಬೇಕಿದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಕ್ಯಾಪ್ಟನ್ ಅಮರೀಂದರ್ ಸಿಂಗ್, ಭಾರತ ಯುವ ಜನಾಂಗದ ದೇಶವಾಗಿದ್ದು, ಯುವ ನಾಯಕರ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಈ ಹಿಂದೆಯೂ ಕೂಡಾ ಯುವ ನಾಯಕರು ಪಕ್ಷದ ನಾಯಕರಾಗಬೇಕೆಂದು ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಅಮರೀಂದರ್ ಸಿಂಗ್,ದೇಶದ ಜನಸಂಖ್ಯೆಯಲ್ಲಿ ಯುವಕರೇ ಹೆಚ್ಚಾಗಿದ್ದು, ದೇಶದ ಜನರೊಂದಿಗೆ ಸಂಪರ್ಕ ಬೆಸೆಯಲು ಹಾಗೂ ಅವರ ಆಶೋತ್ತರಗಳನ್ನು ಪೂರೈಸಲು ಯುವ ನಾಯಕರಿಂದ ಮಾತ್ರ ಸಾಧ್ಯ ಎಂದರು.
ರಾಹುಲ್ ಗಾಂಧಿ ತಮ್ಮ ರಾಜೀನಾಮೆ ನಿರ್ಧಾರವನ್ನು ವಾಪಾಸ್ ಪಡೆಯದಿದ್ದರೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದರೆ ಉತ್ತಮ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CongressPresidentಅಧ್ಯಕ್ಷPriyanka Gandhi Vadraಪ್ರಿಯಾಂಕಾ ಗಾಂಧಿ ವಾದ್ರಾಪಂಜಾಬ್ ಮುಖ್ಯಮಂತ್ರಿPunjab CM ಕಾಂಗ್ರೆಸ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


