ಉನ್ನಾವೋ ಅತ್ಯಾಚಾರ: ಆರೋಪಿ ಶಾಸಕ ಬಿಜೆಪಿಯಿಂದ ಅಮಾನತು
ಉನ್ನಾವೋ ಅತ್ಯಾಚಾರ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಹೇಳಿದ್ದಾರೆ.

Published On :
ಲಖನೌ: ಉನ್ನಾವೋ ಅತ್ಯಾಚಾರ ಪ್ರಕರಣದ ಮುಖ್ಯ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಹೇಳಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆ ಕೂಡ ನಡೆಯುತ್ತಿದೆಎಂದೂ ಅವರು ಪ್ರತಿಪಾದಿಸಿದರು.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಪಕ್ಷದ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ಆಡಳಿತಾರೂಢ ಬಿಜೆಪಿ ಬೆಂಬಲವಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್, ಬಿಎಸ್ಪಿ ಮತ್ತು ಎಸ್ಪಿ ಸೇರಿ ಅನೇಕ ಪಕ್ಷದ ನಾಯಕರು ಆರೋಪಿಸಿದ್ದರು.
ಜೈಲಿನಲ್ಲಿರುವ ಬಿಜೆಪಿ ಶಾಸಕ ಸೆಂಗಾರ್ ಮತ್ತು ಇತರ 9 ಮಂದಿಯ ಮೇಲೆ ಸೋಮವಾರ ಕೊಲೆ ಪ್ರಕರಣ ದಾಖಲಿಸಲಾಗಿದೆ, 19 ವರ್ಷದ ಅತ್ಯಾಚಾರ ಸಂತ್ರಸ್ಥೆ ಹಾಗೂ ಅವರ ಕುಟುಂಬ, ವಕೀಲರು ಪ್ರಯಾಣಿಸುತ್ತಿದ್ದ ಕಾರು ರಾಯ್ ಬರೇಲಿಯಲ್ಲಿ ಟ್ರಕ್ ಗೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದರು. ಅಲ್ಲದೆ ಘಟನೆಯಲ್ಲಿ ಸಂತ್ರಸ್ಥೆ ಹಾಗೂ ಅವಳ ವಕೀಲರು ಗಂಭೀರ ಗಾಯಗೊಂಡಿದ್ದಾರೆ.
ಭಾನುವಾರದ ಕಾರು ಅಪಘಾತದ ಹಿಂದೆ "ಪಿತೂರಿ" ಇದೆ ಎಂದು ಆರೋಪಿಸಿ ಸಂಸ್ತ್ರಸ್ಥೆಯ ಕುಟುಂಬ ದೂರು ದಾಖಲಿಸಿದೆ. ಆಕೆಯ ಕುಟುಂಬ ಸದಸ್ಯರು ಆಸ್ಪತ್ರೆಯ ಹೊರಗೆ ಧರಣಿ ಕುಳಿತಿದ್ದಾರೆ. ಸಂತ್ರಸ್ಥೆಯ ಚಿಕ್ಕಪ್ಪ ಜೈಲಿನಲ್ಲಿರುವ ಮಹೇಶ್ ಸಿಂಗ್ ತನ್ನ ಪತ್ನಿಯ ಕೊನೆಯ ವಿಧಿಗಾಗಿ ಪರೋಲ್ ಕೋರಿದ್ದು ನ್ಯಾಯಾಲಯ ಅವರಿಗೆ ದೊನ ಮಟ್ಟಿಗೆ ಪರೋಲ್ ನೀಡಿದೆ.
ಈ ಮಧ್ಯೆ ರೇಪ್ ಸಂತ್ರಸ್ತೆಯ ರಕ್ಷಣೆಗಾಗಿ ನೇಮಕ ಮಾಡಲಾಗಿದ್ದ ಇಬ್ಬರು ಮಹಿಳಾ ಪೊಲೀಸರು ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


