ಮಹಾರಾಷ್ಟ್ರ: ತನ್ನ ಇಬ್ಬರು ಪುತ್ರಿಯರ ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ಶಿಕ್ಷಕನ ಬಂಧನ
ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಾಜಿ ಕೌನ್ಸಿಲರ್ ಹಾಗೂ ಹಾಲಿ ಪ್ರಾಥಮಿಕ ಶಾಲಾ...

Published On :
ಚಂದ್ರಾಪುರ್: ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಾಜಿ ಕೌನ್ಸಿಲರ್ ಹಾಗೂ ಹಾಲಿ ಪ್ರಾಥಮಿಕ ಶಾಲಾ ಶಿಕ್ಷಕನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಚಂದ್ರಾಪುರ್ ಜಿಲ್ಲೆಯ ನಗ್ಭಿಡ್ ತಾಲೂಕಿನಲ್ಲಿ ಶಾಲಾ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ಕಳೆದ ಐದು ವರ್ಷಗಳಿಂದ ತನ್ನ 17 ವರ್ಷದ ಪುತ್ರಿಯ ಮೇಲೆ ಮನೆಯಲ್ಲಿಯೇ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ಕಳೆದ ಒಂದು ವರ್ಷದಿಂದ ತನ್ನ 14 ವರ್ಷದ ಇನ್ನೊಬ್ಬ ಮಗಳ ಮೇಲೆ ಅತ್ಯಾಚಾರ ಎಸಗಲು ಆರಂಭಿಸಿದ್ದ ಎಂದು ನಗ್ಭಿಡ್ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾರೆ.
ಆರೋಪಿ ಶಿಕ್ಷಕನ ಪತ್ನಿ ಹಲವು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದು, ತನ್ನ ಕಾಮುಕತನವನ್ನು ಬಹಿರಂಗಪಡಿಸದಂತೆ ಪುತ್ರಿಯವರಿಗೆ ಬೆದರಿಕೆ ಹಾಕಿದ್ದನ್ನು ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಬಾಲಕಿಯರು ಇತ್ತೀಚಿಗೆ ತಂದೆಯ ಕೃತ್ಯವನ್ನು ಚಿಕ್ಕಪ್ಪನಿಗೆ ತಿಳಿಸಿದ್ದು, ಅವರು ಪೊಲೀಸರು ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


