ಲೋಕಸಭೆ: ಶಾ, ಇರಾನಿ, ಸೋನಿಯಾಗೆ ಮೊದಲ ಸಾಲಿನಲ್ಲಿ ಆಸನ: ರಾಹುಲ್ ಗೆ 2 ನೇ ಸಾಲಿನ ಹಳೆಯ ಸೀಟು
ಲೋಕಸಭೆಯಲ್ಲಿ ಇದೇ ಮೊದಲ ಬಾರಿಗೆ ಗೆದ್ದಿರುವ ಅಮಿತ್ ಶಾ, ರವಿಶಂಕರ್ ಪ್ರಸಾದ್ ಹಾಗೂ ಸ್ಮೃತಿ ಇರಾನಿ ಅವರಿಗೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಜೊತೆಗೆ ಮೊದಲ ಸಾಲಿನಲ್ಲಿ ಕೂರುವ ಆಸನದ ವ್ಯವಸ್ಥೆ ಮಾಡಲಾಗಿದೆ.

Published On :
ನವದೆಹಲಿ: ಲೋಕಸಭೆಯಲ್ಲಿ ಇದೇ ಮೊದಲ ಬಾರಿಗೆ ಗೆದ್ದಿರುವ ಅಮಿತ್ ಶಾ, ರವಿಶಂಕರ್ ಪ್ರಸಾದ್ ಹಾಗೂ ಸ್ಮೃತಿ ಇರಾನಿ ಅವರಿಗೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಜೊತೆಗೆ ಮೊದಲ ಸಾಲಿನಲ್ಲಿ ಕೂರುವ ಆಸನದ ವ್ಯವಸ್ಥೆ ಮಾಡಲಾಗಿದೆ. ಆದರೆ, ಮೂರನೇ ಬಾರಿಗೆ ಗೆಲುವು ಸಾಧಿಸಿರುವ ರಾಹುಲ್ ಗಾಂಧಿಗೆ ಎರಡನೇ ಸಾಲಿನಲ್ಲಿ ಹಳೆಯ ಸೀಟನ್ನು ನೀಡಲಾಗಿದೆ.
ಸ್ಪೀಕರ್ ಓಂ ಬಿರ್ಲಾ ಇಂದು ಆಸನಗಳನ್ನು ಹಂಚಿಕೆ ಮಾಡಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸದಾನಂದಗೌಡ, ನರೇಂದ್ರ ಸಿಂಗ್ ತೋಮರ್, ಅರ್ಜುನ್ ಮುಂಡಾ ಮತ್ತು ಅರವಿಂದ್ ಸಾವಂತ್ ಅವರಿಗೂ ಮೊದಲ ಸಾಲಿನಲ್ಲಿ ಆಸನದ ಹಂಚಿಕೆ ಮಾಡಲಾಗಿದೆ.
ಪ್ರತಿಪಕ್ಷಗಳ ಸಾಲಿನಲ್ಲಿ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌದರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹಾಗೂ ಡಿಎಂಕೆ ಮುಖಂಡ ಟಿಆರ್ ಬಾಲು ಅವರಿಗೆ ಮೊದಲ ಸಾಲಿನಲ್ಲಿ ಆಸನ ನೀಡಲಾಗಿದೆ.
ಈ ಹಿಂದೆ ರಾಜ್ಯಸಭೆ ಸದಸ್ಯೆಯಾಗಿ ಈ ಬಾರಿ ಲೋಕಸಭೆಗೆ ಮೊದಲ ಬಾರಿಗೆ ಪ್ರವೇಶಿಸಿರುವ ಸ್ಮೃತಿ ಇರಾನಿಗೆ ಮೊದಲ ಸಾಲಿನಲ್ಲಿ ಆಸನ ನೀಡಲಾಗಿದೆ. ಶಾ ಹಾಗೂ ರವಿಶಂಕರ್ ಪ್ರಸಾದ್ ಅವರಿಗೆ ಈ ಹಿಂದೆ ಮೇಲ್ಮನೆಯಲ್ಲೂ ಮೊದಲ ಸಾಲಿನಲ್ಲಿ ಆಸನದ ವ್ಯವಸ್ಥೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


