ಮೋದಿ ಸಂಪುಟ: 51 ಜನ ಕರೋಡ್ ಪತಿ ಸಚಿವರು, 22 ಸಚಿವರ ವಿರುದ್ದ ಇದೆ ಕ್ರಿಮಿನಲ್ ಕೇಸ್!
ಪ್ರಧಾನಿ ನರೇಂದ್ರ ಮೋದಿ 2.0 ಸರ್ಕಾರ ಕಾರ್ಯನಿರ್ವಹಿಸಲು ಪ್ರಾರಂಭಿಸಿದ್ದು, ಮೇ.31 ರಂದು ಮೊದಲ ಸಚಿವ ಸಂಪುಟ ಸಭೆ ನಡೆದಿದೆ.

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2.0 ಸರ್ಕಾರ ಕಾರ್ಯನಿರ್ವಹಿಸಲು ಪ್ರಾರಂಭಿಸಿದ್ದು, ಮೇ.31 ರಂದು ಮೊದಲ ಸಚಿವ ಸಂಪುಟ ಸಭೆ ನಡೆದಿದೆ.
ಈ ನಡುವೆ ಜನಪ್ರತಿನಿಧಿಗಳ ಬಗ್ಗೆ ಸಮೀಕ್ಷೆ ನಡೆಸಿರುವ ಎಡಿಆರ್ ವರದಿಯ ಪ್ರಕಾರ ಮೋದಿ ಸಂಪುಟದಲ್ಲಿ 51 ಜನರು ಕರೋಡ್ ಪತಿಗಳಿದ್ದಾರೆ ಎಂದು ತಿಳಿದುಬಂದಿದೆ.
ಮೋದಿ ಸಚಿವ ಸಂಪುಟದಲ್ಲಿ 58 ಜನ ಸಚಿವರಿದ್ದು, ಈ ಪೈಕಿ 51 ಜನರು ಕೋಟ್ಯಾಧಿಪತಿಗಳಾಗಿದ್ದು, 58 ಸಚಿವರ ಪೈಕಿ 22 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ.
58 ಸಚಿವರ ಪೈಕಿ 56 ಸಚಿವರು ಸಲ್ಲಿಸಿರುವ ಪ್ರಮಾಣ ಪತ್ರವನ್ನು ಅಧ್ಯಯನ ಮಾಡಿ ಎಡಿಆರ್ ಈ ವರದಿ ಪ್ರಕಟಿಸಿದೆ. ಮೋದಿ ಸಂಪುಟದ ಕರೋಡ್ ಪತಿ ಸಚಿವರಲ್ಲಿ ಪ್ರತಿ ವ್ಯಕ್ತಿಗೆ ಸರಾಸರಿ 14.72 ಕೋಟಿ ರೂಪಾಯಿ ಆಸ್ತಿ ಇದೆ ಎಂದು ಎಡಿಆರ್ ವಿಶ್ಲೇಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


