ಗಾಂಧಿ ಕುರಿತ ವಿವಾದಾತ್ಮಕ ಟ್ವೀಟ್, ಐಎಎಸ್ ಅಧಿಕಾರಿ ಎತ್ತಂಗಡಿ
ವಿಶ್ವದಾದ್ಯಂತ ಇರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ತೆರವುಗೊಳಿಸಬೇಕು ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದ ಮಹಾರಾಷ್ಟ್ರದ ಐಎಎಸ್ ಅಧಿಕಾರಿ ನಿಧಿ ಚೌಧರಿಯನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ

Published On :
ಮಹಾರಾಷ್ಟ್ರ: ವಿಶ್ವದಾದ್ಯಂತ ಇರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ತೆರವುಗೊಳಿಸಬೇಕು ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದ ಮಹಾರಾಷ್ಟ್ರದ ಐಎಎಸ್ ಅಧಿಕಾರಿ ನಿಧಿ ಚೌಧರಿಯನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ನಿಧಿ ಚೌಧರಿಯನ್ನು ಮಹಾರಾಷ್ಟ್ರದ ಮಹಾನಗರ ಪಾಲಿಕೆಯಿಂದ ಮಂತ್ರಾಲಯದ ನೀರು ಪೂರೈಕೆ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ .ಮಹಾತ್ಮ ಗಾಂಧಿ ಕುರಿತ ಅವಹೇಳನಕಾರಿ ಟ್ವೀಟ್ ಗಾಗಿ ಮಹಾರಾಷ್ಟ್ರ ಸರ್ಕಾರದಿಂದ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಗಾಂಧಿ ಕುರಿತ ವಿವಾದಾತ್ಮಕ ಟ್ವೀಟ್ ಹಿನ್ನೆಲೆಯಲ್ಲಿ ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎನ್ ಸಿಪಿ ಅಧ್ಯಕ್ಷ ಶರದ್ ಪವರ್ ಭಾನುವಾರ ಸರ್ಕಾರವನ್ನು ಒತ್ತಾಯಿಸಿದ್ದರು. ಈ ಒತ್ತಾಯದ ಬೆನ್ನಲ್ಲೇ ನಿಧಿ ಚೌಧರಿಯನ್ನು ವರ್ಗಾವಣೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MaharashtraTweetMahatma Gandhiಮಹಾತ್ಮ ಗಾಂಧಿಟ್ವೀಟ್ವರ್ಗಾವಣೆIAS Officer Nidhi ChoudhariTransferred ಮಹಾರಾಷ್ಟ್ರಐಎಎಸ್ ಅಧಿಕಾರಿ ನಿಧಿ ಚೌಧರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


