ಕಚೇರಿ ವಾರ್: ಬಿಜೆಪಿ ಕಚೇರಿಯ ಬಾಗಿಲು ಮುರಿದು ಟಿಎಂಸಿ ಚಿಹ್ನೆ ಬಿಡಿಸಿದ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಕಚೇರಿ ವಶಪಡಿಸಿಕೊಂಡಿರುವ ಆರೋಪ ಪ್ರತ್ಯಾರೋಪ ಕೇಳಿಬಂದಿದ್ದು...

Published On :
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಕಚೇರಿ ವಶಪಡಿಸಿಕೊಂಡಿರುವ ಆರೋಪ ಪ್ರತ್ಯಾರೋಪ ಕೇಳಿಬಂದಿದ್ದು, ಸಿಎಂ ಮಮತಾ ಬ್ಯಾನರ್ಜಿ ಸ್ವತಃ ಬಿಜೆಪಿ ಕಚೇರಿಯ ಬಾಗಿಲು ಮುರಿದು ಅಲ್ಲಿ ಟಿಎಂಸಿ ಚಿಹ್ನೆ ಬಿಡಿಸಿ ಬಂದಿದ್ದಾರೆ.
ಕಚೇರಿಯ ಕೇಸರಿ ಬಣ್ಣದ ಗೋಡೆಯ ಮೇಲೆ ತೃಣಮೂಲ ಕಾಂಗ್ರೆಸ್ ನ ಚಿಹ್ನೆಯನ್ನು ಬರೆದಿದ್ದಾರೆ ಮಮತಾ ಬ್ಯಾನರ್ಜಿ, ಇದಕ್ಕೂ ಮುನ್ನ ತೃಣ ಮೂಲ ಕಾಂಗ್ರೆಸ್ ನ ಕಾರ್ಯಕರ್ತರು ತಮ್ಮ ಕಚೇರಿಯನ್ನು ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಆಯ್ಕೆಗೊಂಡ ಸಂಸದ ಅರ್ಜುನ್ ಸಿಂಗ್ ಅವರ ಬೆಂಬಲಿಗರು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರ ಈ ಘಟನೆ ನಡೆದಿದ್ದು, ಮಮತಾ ಬ್ಯಾನರ್ಜಿ ಕಾರ್ಯಕರ್ತರನ್ನುದ್ದೇಶಿಸಿ ಬಿಜೆಪಿ ಕಚೇರಿಗೆ ತೆರಳಿ, ಬಿಜೆಪಿ ಚಿಹ್ನೆಯನ್ನು ತೆಗೆದು ಟಿಎಂಸಿ ಚಿಹ್ನೆಯನ್ನು ಬರೆದಿದ್ದಾರೆ ಎಂದು ವರದಿ ಪ್ರಕಟವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


