ವಿದೇಶಕ್ಕೆ ತೆರಳಲು ರಾಬರ್ಟ್ ವಾದ್ರಗೆ ಅನುಮತಿ
ಅಕ್ರಮ ಹಣ ವರ್ಗಾವಣೆ ಪ್ರಕರಣ ಎದುರಿಸುತ್ತಿರುವ ಉದ್ಯಮಿ ರಾಬರ್ಟ್ ವಾದ್ರ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, 6 ವಾರಗಳ ಕಾಲ ವಿದೇಶಕ್ಕೆ ತೆರಳಲು ದೆಹಲಿ ಕೋರ್ಟ್ ಅನುಮತಿ ನೀಡಿದೆ.

Published On :
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಎದುರಿಸುತ್ತಿರುವ ಉದ್ಯಮಿ ರಾಬರ್ಟ್ ವಾದ್ರ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, 6 ವಾರಗಳ ಕಾಲ ವಿದೇಶಕ್ಕೆ ತೆರಳಲು ದೆಹಲಿ ಕೋರ್ಟ್ ಅನುಮತಿ ನೀಡಿದೆ.
ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ವಾದ್ರಾಗೆ ಅಮೆರಿಕ ಹಾಗೂ ನೆದರ್ಲ್ಯಾಂಡ್ ಗಳಿಗೆ ತೆರಳಲು 6 ವಾರಗಳ ಕಾಲ ಅನುಮತಿ ನೀಡಿದ್ದರೆ. ಆದರೆ ಲಂಡನ್ ಗೆ ತೆರಳಲು ಅನುಮತಿ ನಿರಾಕರಿಸಲಾಗಿದ್ದಾರೆ.
ಆರೋಗ್ಯ ಕಾರಣಗಳಿಂದಾಗಿ ವಿದೇಶಕ್ಕೆ ತೆರಳಲು ಅನುಮತಿ ನೀಡುವಂತೆ ವಾದ್ರ ಕೋರ್ಟ್ ಮೊರೆ ಹೋಗಿದ್ದರು. ಲಂಡನ್ ನಲ್ಲಿ ಆಸ್ತಿ 1.9 ಮಿಲಿಯನ್ ಪೌಂಡ್ಸ್ ಮೊತ್ತದ ಆಸ್ತಿ ಖರೀದಿಸಿರುವುದಕ್ಕೆ ವಾಧ್ರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


