ಆಶಾ ಆರೋಗ್ಯ ಕಾರ್ಯಕರ್ತೆಯರ ವೇತನ 10 ಸಾವಿರ ರೂ.ಗೆ ಹೆಚ್ಚಿಸಿದ ಜಗನ್
ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಮುಂದಾಗಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್....

Published On :
ವಿಜಯವಾಡ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಮುಂದಾಗಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು, ಆಶಾ ಆರೋಗ್ಯ ಕಾರ್ಯಕರ್ತೆಯರ ವೇತನವನ್ನು ತಿಂಗಳಿಗೆ 10 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿದ್ದಾರೆ.
ಮುಖ್ಯಮಂತ್ರಿ ಅವರು ಆರೋಗ್ಯ ಮತ್ತು ವೈದ್ಯಕೀಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಆಶಾ ಕಾರ್ಯಕರ್ತೆಯರ ವೇತನವನ್ನು ತಿಂಗಳಿಗೆ 3 ಸಾವಿರದಿಂದ 10 ಸಾವಿರ ರೂ.ಹೆಚ್ಚಿಸುವ ಆದೇಶ ಹೊರಡಿಸಿದರು.
ಇದೇ ವೇಳೆ, ಎನ್.ಟಿ.ಅರ್ ಆರೋಗ್ಯ ಶ್ರೀ ಯೋಜನೆಯನ್ನು ವೈಎಸ್ಆರ್ ಆರೋಗ್ಯಶ್ರೀ ಯೋಜನೆ ಎಂದು ಮರುನಾಮಕರಣ ಮಾಡುವುದಾಗಿ ಅವರು ಘೋಷಿಸಿದರು.
108 ಆಂಬುಲೆನ್ಸ್ ಸೇವೆಗಳನ್ನು ಪರಿಷ್ಕರಿಸಬೇಕು. 108 ಆಂಬುಲೆನ್ಸ್ ಸೇವೆಗಳು ರಾಜ್ಯಾದ್ಯಂತ ಲಭ್ಯವಾಗುವಂತೆ ಮಾಡಲಾಗುವುದು ಮತ್ತು ಹೆಚ್ಚಿನ ಆಂಬುಲೆನ್ಸ್ ಗಳನ್ನು ಒದಗಿಸಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


