ದೇಶಾದ್ಯಂತ ತಮಿಳು ಐಚ್ಛಿಕ ಭಾಷೆಯಾಗಬೇಕು: ಪ್ರಧಾನಿಗೆ ಪಳನಿಸ್ವಾಮಿ ಒತ್ತಾಯ
ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದಡಿ ಹಿಂದಿ ಕಡ್ಡಾಯಗೊಳಿಸಲು ಹೋಗಿ ವಿವಾದಕ್ಕಿಡಾದ ಬೆನ್ನಲ್ಲೇ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ತಮಿಳು...

Published On :
ಚೆನ್ನೈ: ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದಡಿ ಹಿಂದಿ ಕಡ್ಡಾಯಗೊಳಿಸಲು ಹೋಗಿ ವಿವಾದಕ್ಕಿಡಾದ ಬೆನ್ನಲ್ಲೇ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ತಮಿಳು ಐಚ್ಛಿಕ ಭಾಷೆಯಾಗಿ ಕಲಿಯಲು ಅವಕಾಶ ಮಾಡಿಕೊಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪಳನಿಸ್ವಾನಿ, ತಮಿಳುನಾಡನ್ನು ಹೊರತುಪಡಿಸಿ ಇತರೆ ರಾಜ್ಯಗಳ ಪಠ್ಯದ ಆಯ್ಕೆಯಲ್ಲಿ ತಮಿಳು ಭಾಷೆಗೆ ಆದ್ಯತೆ ಕೊಡಬೇಕು ಎಂದು ಹೇಳಿದ್ದಾರೆ.
ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಜೀಯವರೇ ಇತರೆ ರಾಜ್ಯಗಳಲ್ಲೂ ತಮಿಳು ಐಚ್ಛಿಕ ಭಾಷೆಯಾಗಿ ಕಲಿಯಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ಮೂಲಕ ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಯ ಕಲಿಕೆಗೆ ಅವಕಾಶ ಮಾಡಿಕೊಟ್ಟರೆ ಇದೊಂದು ದೊಡ್ಡ ಸೇವೆಯಾಗಲಿದೆ ಎಂದು ಪಳನಿಸ್ವಾಮಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


