ಅನಗತ್ಯ ಹೇಳಿಕೆ ನೀಡುವವರು 'ಧರ್ಮ' ಇಲ್ಲದವರು: ಸಚಿವ ಗಿರಿರಾಜ್ ಸಿಂಗ್ ವಿರುದ್ಧ ನಿತೀಶ್ ಕುಮಾರ್ ಟೀಕೆ
ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರನ್ನು ಟೀಕಿಸಿ ಹೇಳಿಕೆ ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಸುದ್ದಿಯಲ್ಲಿರಬೇಕೆಂದು ...

Published On :
ಪಾಟ್ನಾ: ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರನ್ನು ಟೀಕಿಸಿ ಹೇಳಿಕೆ ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಸುದ್ದಿಯಲ್ಲಿರಬೇಕೆಂದು ಅನಗತ್ಯವಾಗಿ ಹೇಳಿಕೆಗಳನ್ನು ನೀಡುವವರಿಗೆ ಯಾವುದೇ ಧರ್ಮವಿರುವುದಿಲ್ಲ ಎಂದಿದ್ದಾರೆ.
ಕೇಂದ್ರ ಸಚಿವ ಗಿರಿರಾಜ್ ಹೇಳಿದ್ದಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸದಾ ಸುದ್ದಿಯಲ್ಲಿರಬೇಕೆಂದು ಕೆಲವರು ಅನಗತ್ಯವಾಗಿ ಹೇಳಿಕೆಗಳನ್ನು ನೀಡುತ್ತಿರುತ್ತಾರೆ, ಹಾಗಾದರೂ ಮಾಧ್ಯಮಗಳಲ್ಲಿ ಬರಬೇಕೆಂಬುದು ಅವರ ಆಸೆ. ನಮ್ಮ ದೇಶದ ಪ್ರತಿ ಧರ್ಮದಲ್ಲಿ ಜನರಿಗೆ ಪ್ರೀತಿ ಗೌರವಗಳನ್ನು ತೋರಿಸುವುದನ್ನು ಹೇಳಿಕೊಡುತ್ತಾರೆ, ಆದರೆ ಇಂತವರಿಗೆ ಯಾವುದೇ ಧರ್ಮವಿಲ್ಲ ಎಂದು ನಿತೀಶ್ ಕುಮಾರ್ ಇಂದು ಪಾಟ್ನಾದಲ್ಲಿ ಮುಸಲ್ಮಾನ ಬಾಂಧವರ ಜೊತೆ ಮಸೀದಿಯಲ್ಲಿ ರಂಜಾನ್ ಪ್ರಾರ್ಥನೆ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


