ದೇಶ

ಲೋಕಸಭೆ ಅಧಿವೇಶನಕ್ಕೂ ಮುನ್ನ ಅಯೋಧ್ಯಾಗೆ ಉದ್ಧವ್ ಠಾಕ್ರೆ ಭೇಟಿ

17ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗುವ ಮುನ್ನ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ ಎಲ್ಲಾ 18 ನೂತನ...

ಲೋಕಸಭೆ ಅಧಿವೇಶನಕ್ಕೂ ಮುನ್ನ ಅಯೋಧ್ಯಾಗೆ ಉದ್ಧವ್ ಠಾಕ್ರೆ ಭೇಟಿ
ಉದ್ಧವ್ ಠಾಕ್ರೆ
Published On :
ಮುಂಬೈ: 17ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗುವ ಮುನ್ನ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ ಎಲ್ಲಾ 18 ನೂತನ ಸಂಸದರೊಂದಿಗೆ ಅಯೋಧ್ಯಾಗೆ ಭೇಟಿ ನೀಡಲಿದ್ದಾರೆ ಎಂದು ಬುಧವಾರ ಮೂಲಗಳು ತಿಳಿಸಿವೆ.
ಉದ್ಧವ್ ಠಾಕ್ರೆ ಅವರು ಅಯೋಧ್ಯಾಗೆ ಭೇಟಿ ನೀಡುತ್ತಿರುವುದು ನಿಜ ಮತ್ತು ಜೂನ್ 17ರಂದು ಸಂಸತ್ ಅಧಿವೇಶನ ಆರಂಭವಾಗುವ ಮುನ್ನವೇ ಅಲ್ಲಿಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ ಎಂದು ಉದ್ಧವ್ ಠಾಕ್ರೆ ಅವರ ಆಪ್ತ ಹಾಗೂ ಸೇನಾ ಮಾಧ್ಯಮ ಉಸ್ತುವಾರಿ ಹರ್ಷಲ್ ಪ್ರಧಾನ್ ಅವರು ತಿಳಿಸಿದ್ದಾರೆ.
ಉದ್ಧವ್ ಠಾಕ್ರೆ ಅವರು ಅಯೋಧ್ಯಾಗೆ ಭೇಟಿ ನೀಡುವ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷ ನವೆಂಬರ್ ನಲ್ಲಿ ಅಯೋಧ್ಯಾಗೆ ಭೇಟಿ ನೀಡಿದ್ದ ಉದ್ಧವ್ ಠಾಕ್ರೆ ಅವರು, ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸಬೇಕು ಎಂದು ಒತ್ತಾಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.