ದೇಶ

ಆರು ತಿಂಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆ ಭರ್ತಿ ಮಾಡಿ, ಇಲ್ಲದಿದ್ದರೆ ಅನುದಾನ ಬಂದ್: ವಿ.ವಿ.ಗಳಿಗೆ ಯುಜಿಸಿ ಎಚ್ಚರಿಕೆ

ಮುಂದಿನ ಆರು ತಿಂಗಳೊಳಗೆ ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ 3 ಲಕ್ಷ ಬೋಧಕ ಹುದ್ದೆಗಳನ್ನು ...

ಆರು ತಿಂಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆ ಭರ್ತಿ ಮಾಡಿ, ಇಲ್ಲದಿದ್ದರೆ ಅನುದಾನ ಬಂದ್: ವಿ.ವಿ.ಗಳಿಗೆ ಯುಜಿಸಿ ಎಚ್ಚರಿಕೆ
ಯುಜಿಸಿ
Published On :
ನವದೆಹಲಿ: ಮುಂದಿನ ಆರು ತಿಂಗಳೊಳಗೆ ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ 3 ಲಕ್ಷ ಬೋಧಕ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಕೇಂದ್ರ ಧನಸಹಾಯ ಆಯೋಗ(ಯುಜಿಸಿ) ವಿಶ್ವವಿದ್ಯಾಲಯಗಳಿಗೆ ಆದೇಶ ನೀಡಿದೆ.
ಯುಜಿಸಿಯ ಆದೇಶವನ್ನು ಪಾಲಿಸದಿದ್ದರೆ ಧನಸಹಾಯ ನೆರವನ್ನು ನಿಲ್ಲಿಸಲಾಗುವುದು ಎಂದು ಕೂಡ ಎಚ್ಚರಿಕೆ ನೀಡಿದೆ. ಈ ಕುರಿತು ಕಳೆದ ಮಂಗಳವಾರ ಯುಜಿಸಿ ಸುತ್ತೋಲೆ ಹೊರಡಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಬೋಧಕ ಸಿಬ್ಬಂದಿ ಕೊರತೆಯಿದೆ ಎಂಬುದನ್ನು ಯುಜಿಸಿ ಮಾರ್ಗಸೂಚಿಯಲ್ಲಿ ಗಮನಕ್ಕೆ ತಂದಿದೆ.
ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳನ್ನು 15 ದಿನಗಳೊಳಗೆ ಗುರುತಿಸಿ 180 ದಿನಗಳೊಳಗೆ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಆಯೋಗ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಿಂದ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 3 ಲಕ್ಷ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಸುಮಾರು 6,100 ಬೋಧಕ ಹುದ್ದೆಗಳಿದ್ದು ಅವುಗಳಲ್ಲಿ 4 ಸಾವಿರ ಹುದ್ದೆಗಳು ದೆಹಲಿ ವಿಶ್ವವಿದ್ಯಾಲಯವೊಂದರಲ್ಲಿಯೇ ಇದೆ.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಗುಣಮಟ್ಟದ ಉಪನ್ಯಾಸಕರ ಕೊರತೆ ಇಂದು ದೇಶದ ಉನ್ನತ ಶಿಕ್ಷಣ ವ್ಯವಸ್ಥೆ ಎದುರಿಸುತ್ತಿರುವ ಸಮಸ್ಯೆಗಳಲ್ಲೊಂದು. ಇದರಿಂದ ಗುಣಮಟ್ಟದ ಉನ್ನತ ಶಿಕ್ಷಣ ದೊರಕುವುದರ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಕಡ್ಡಾಯವಾಗಿ ಯುಜಿಸಿಯ ಮಾರ್ಗಸೂಚಿಯನ್ನು ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳು ಪಾಲಿಸಬೇಕಾಗಿದ್ದು ಸಮಯಕ್ಕೆ ಸರಿಯಾಗಿ ಖಾಲಿಯಿರುವ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ನೇಮಕ ಮಾಡಬೇಕು ಎಂದು ಯುಜಿಸಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.