ಪುಲ್ವಾಮದಲ್ಲಿ ಸೇನೆಯ ಭರ್ಜರಿ ಕಾರ್ಯಾಚರಣೆ: 4 ಉಗ್ರರು ಹತ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಸೇನಾ ಕಾರ್ಯಾಚರಣೆ ನಡೆಸಿದ್ದು, ಮನೆಯಲ್ಲಿ ಅಡಗಿ ಕುಳಿತು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ 4 ಉಗ್ರರನ್ನು ಹೊಡೆದುರುಳಿಸಿದ್ದಾರೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಸೇನಾ ಕಾರ್ಯಾಚರಣೆ ನಡೆಸಿದ್ದು, ಮನೆಯಲ್ಲಿ ಅಡಗಿ ಕುಳಿತು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ 4 ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಪುಲ್ವಾಮ ಜಿಲ್ಲೆಯ ಲಸ್ಸಿಪೋರಾದ ಪಂಜ್ರನ್ ಪ್ರದೇಶದಲ್ಲಿನ ಮನೆಯೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಸೇನಾಪಡೆಗಳು ಮನೆಯನ್ನು ಸುತ್ತುವರೆರಿವೆ. ಈ ವೇಳೆ ಸೈನಿಕರ ಆಗಮನದ ವಿಚಾರ ತಿಳಿಯುತ್ತಲೇ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದು, ಈ ವೇಳೆ ಸೈನಿಕರೂ ಕೂಡ ಪ್ರತಿದಾಳಿ ಮಾಡಿದ್ದಾರೆ.
ಸೈನಿಕರ ಗುಂಡೇಟಿಗೆ ಒಬ್ಬರಾದ ಬಳಿಕ ಒಬ್ಬರಂತೆ ಒಟ್ಟು 4 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಸಿಆರ್ ಪಿಎಫ್ ಹಾಗೂ ವಿಶೇಷ ಕಾರ್ಯಾಚರಣೆ ಪಡೆಯ 44 ರಾಷ್ಟ್ರೀಯ ರೈಫಲ್ಸ್ ದಳ ಸೈನಿಕರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದರು.
ಅಂತೆಯೇ ಸ್ಖಳದಲ್ಲಿ ಮತ್ತಷ್ಟು ಉಗ್ರರು ಅವಿತಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದ್ದು, ಪ್ರಸ್ತುತ ಸೇನೆ ಸುತ್ತಮುತ್ತಲ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದೆ. ಅಂತೆಯೇ ಉಗ್ರರು ದಾಳಿ ನಡೆಸಲು ತಂದಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಕ್ಕೆ ಪಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and Kashmirterroristಭಯೋತ್ಪಾದಕರುಭಾರತೀಯ ಸೇನೆPulwama encounterಪುಲ್ವಾಮಾ ಎನ್ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


