6 ವರ್ಷಗಳ ನಂತರ ಜನಾರ್ದನ ರೆಡ್ಡಿ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ
ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ...

Published On :
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಇದರೊಂದಿಗೆ ಆರು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಜನಾರ್ದನ ರೆಡ್ಡಿ ತಮ್ಮ ತವರೂರು ಬಳ್ಳಾರಿಗೆ ತೆರಳಲು ಅವಕಾಶ ದೊರೆತಂತಾಗಿದೆ.
ಬಳ್ಳಾರಿ ಪ್ರವೇಶಿಸಲು ಅನುಮತಿ ಕೋರಿ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸದ ಸುಪ್ರೀಂ ಕೋರ್ಟ್ ರಜಾಕಾಲದ ಪೀಠ, ಜೂನ್ 8ರಿಂದ ಎರಡು ವಾರಗಳ ಕಾಲ ಬಳ್ಳಾರಿಗೆ ತೆರಳಲು ಅನುಮತಿ ನೀಡಿದೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಮ್ಮ ಮಾವನನ್ನು ಬಳ್ಳಾರಿಯ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಅವರನ್ನು ಭೇಟಿ ಮಾಡುವ ಸಲುವಾಗಿ ಬಳ್ಳಾರಿ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಕೋರಿ ರೆಡ್ಡಿ ಗುರುವಾರ ಅರ್ಜಿ ಸಲ್ಲಿಸಿದ್ದರು.
ಅಕ್ರಣ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರೆಡ್ಡಿ 2015ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ. ಆದರೆ ರೆಡ್ಡಿ ಯಾವುದೇ ಕಾರಣಕ್ಕೂ ಬಳ್ಳಾರಿ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ ಎಂದು ಕೋರ್ಟ್ ಆದೇಶಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


