ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; ಬೆಂಕಿ ನಂದಿಸಲು ಹರಸಾಹಸ
ಹೌರಾದ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದುವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ....

Published On :
ಕೊಲ್ಕೋತಾ: ಹೌರಾದ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದುವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.
ಹೌರಾದ ಜಗನ್ನಾಥ ಘಾಟ್‌ನಲ್ಲಿರುವ ಕೆಮಿಕಲ್ ಫ್ಯಾಕ್ಟರಿ ಗೋದಾಮಿನಲ್ಲಿ ಶನಿವಾರ ನಸುಕಿನ 2 ಗಂಟೆಯ ವೇಳೆಗೆ ಬೆಂಕಿ ಕಾಣಸಿಕೊಂಡಿದ್ದು ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ.
ಸ್ಥಳಕ್ಕೆ 20 ಕ್ಕೂ ಹೆಚ್ಚು ವಾಹನಗಳೊಂದಿಗೆ ಆಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಇನ್ನೂ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾದ ಕಾರಣ ವಾಹನಗಳ ಮಾರ್ಗ ಬದಲಾಯಿಸಲಾಗಿದೆ. ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


