ಬಂಗಾಳದಲ್ಲಿ ಮತ್ತೆ ಹಿಂಸಾಚಾರ: ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಹೊಡೆದಾಟ; 4 ಸಾವು!
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಕ್ಷದ ಕಾರ್ಯಕರ್ತರು ಮತ್ತು ಬಿಜೆಪಿ ನಡುವೆ ನಡೆದ ಸಂಘರ್ಷದಲ್ಲಿ ನಾಲ್ವರು ಕಾರ್ಯಕರ್ತರು ಮೃತಪಟ್ಟಿದ್ದಾರೆ.

Published On :
ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಕ್ಷದ ಕಾರ್ಯಕರ್ತರು ಮತ್ತು ಬಿಜೆಪಿ ನಡುವೆ ನಡೆದ ಸಂಘರ್ಷದಲ್ಲಿ ನಾಲ್ವರು ಕಾರ್ಯಕರ್ತರು ಮೃತಪಟ್ಟಿದ್ದಾರೆ.
ಶನಿವಾರ ರಾತ್ರಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದ್ದು ಇದರಲ್ಲಿ ಮೂವರು ಬಿಜೆಪಿ ಹಾಗೂ ಓರ್ವ ಟಿಎಂಸಿ ಕಾರ್ಯಕರ್ತ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನಝತ್ ನಲ್ಲಿ ಬಿಜೆಪಿ ಬಾವುಟಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ಶುರುವಾಗಿದೆ. ಈ ವೇಳೆ ಮೂವರು ಬಿಜೆಪಿ ಕಾರ್ಯಕರ್ತರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಅವರ ಶವಗಳು ಸಿಕ್ಕಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರ ಹತ್ಯೆ ಕುರಿತಂತೆ ವರದಿ ನೀಡುವಂತೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ವರದಿ ನೀಡುವಂತೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


