ದೇಶ

ಆದಾಯ ತೆರಿಗೆ ಇಲಾಖೆಯ 12 ಹಿರಿಯ ಅಧಿಕಾರಿಗಳನ್ನು ಕಿತ್ತೊಗೆದ ಕೇಂದ್ರ ಸರ್ಕಾರ!

ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯ 12 ಹಿರಿಯ ಅಧಿಕಾರಿಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಆದಾಯ ತೆರಿಗೆ ಇಲಾಖೆಯ 12 ಹಿರಿಯ ಅಧಿಕಾರಿಗಳನ್ನು ಕಿತ್ತೊಗೆದ ಕೇಂದ್ರ ಸರ್ಕಾರ!
ಆದಾಯ ತೆರಿಗೆ ಇಲಾಖೆಯ 12 ಹಿರಿಯ ಅಧಿಕಾರಿಗಳನ್ನು ಕಿತ್ತೊಗೆದ ಕೇಂದ್ರ ಸರ್ಕಾರ!
Published On :
ನವದೆಹಲಿ: ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯ 12 ಹಿರಿಯ ಅಧಿಕಾರಿಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. 
ವೃತ್ತಿಗೆ ಸಂಬಂಧಪಟ್ಟಂತೆ ದುರ್ವರ್ತನೆ, ಭ್ರಷ್ಟಾಚಾರದ ಆರೋಪದಲ್ಲಿ ಹಿರಿಯ ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಜಂಟಿ ಆಯುಕ್ತ ಶ್ರೇಣಿಯ ಅಧಿಕಾರಿಯೂ ಈ ಪೈಕಿ ಇದ್ದು, ಭ್ರಷ್ಟಾಚಾರ, ಉದ್ಯಮಿಯಿಂದ ಸುಲಿಗೆ ಆರೋಪಗಳು ಕೇಳಿಬಂದಿವೆ. 
ಕೆಲಸಕ್ಕೆ ಕುತ್ತು ತಂದುಕೊಂಡಿರುವ ಅಧಿಕಾರಿಗಳ ಪೈಕಿ ಐಆರ್ ಎಸ್ ಅಧಿಕಾರಿಯೂ ಇದ್ದು, ಕುಟುಂಬ ಸದಸ್ಯರು ಹಾಗೂ ತನ್ನ ಹೆಸರಿನಲ್ಲಿ 3.17 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. 
ಇನ್ನು ಭ್ರಷ್ಟಾಚಾರ ಆರೋಪ ಹೊತ್ತು ಸಿಬಿಐ ತನಿಖೆ ಎದುರಿಸುತ್ತಿದ್ದ,  ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಕ್ಕಾಗಿ 2009 ರಲ್ಲೇ ಅಮಾನತುಗೊಂಡಿದ್ದ ಆದಾಯ ತೆರಿಗೆ ಆಯುಕ್ತರೊಬ್ಬರನ್ನೂ ಕೇಂದ್ರ ಸರ್ಕಾರ ಕೆಲಸದಿಂದ ವಜಾಗೊಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.