ಬಂಗಾಳದಲ್ಲಿ ಮತ್ತೆ ಸಂಘರ್ಷ: ಬಾಂಬ್ ದಾಳಿಯಲ್ಲಿ ಒಂದು ಸಾವು, ಹಲವರಿಗೆ ಗಾಯ
ಪಶ್ಚಿಮ ಬಂಗಾಳದಲ್ಲಿ ಮತ್ತೆ ಸಂಘರ್ಷ ಮುಂದುವರೆದಿದ್ದು, ಇಂದು ನಡೆದ ಕಚ್ಛಾ ಬಾಂಬ್ ದಾಳಿ ಓರ್ವ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Published On :
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮತ್ತೆ ಸಂಘರ್ಷ ಮುಂದುವರೆದಿದ್ದು, ಇಂದು ನಡೆದ ಕಚ್ಛಾ ಬಾಂಬ್ ದಾಳಿ ಓರ್ವ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಲೋಕಸಭಾ ಚುನಾವಣೆ ವೇಳೆ ವ್ಯಾಪಕ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದ್ದ 24ಪರಗಣ ಜಿಲ್ಲೆಯ ಕಂಕಿನಾರಾದಲ್ಲಿ ಮತ್ತೆ ಸಂಘರ್ಷ ಸಂಭವಿಸಿದ್ದು, ಇಲ್ಲಿನ ಬುರುಯ್ ಪಾರದಲ್ಲಿ ದುಷ್ಕರ್ಮಿಗಳು ಮನೆ ಮೇಲೆ ಎಸೆದ ಕಚ್ಛಾ ಬಾಂಬ್ ದಾಳಿಯಲ್ಲಿ ಓರ್ವ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಇನ್ನು ಮೃತ ವ್ಯಕ್ತಿಯನ್ನು 68 ವರ್ಷದ ಮಹಮದ್ ಮುಖ್ತಾರ್ ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ ಮುಖ್ತಾರ್ ಪತ್ನಿ ಕೂಡ ಸೇರಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಮುಖ್ತಾರ್ ಮತ್ತು ಆತನ ನೆರೆ ಮನೆಯವರು ಮನೆಯಂಗಳದಲ್ಲಿ ಕುಳಿತು ಮಾತನಾಡುತ್ತಿದ್ದಾಗ ದುಷ್ಕರ್ಮಿಗಳು ಕಚ್ಚಾಬಾಂಬ್ ಎಸೆದು ಪರಾರಿಯಾಗಿದ್ದಾರೆ. ಪ್ರಸ್ತುತ ಘಟನಾ ಪ್ರದೇಶದಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದ್ದು ಮುಂಜಾಗ್ರತಾ ಕ್ರಮವಾಗಿ ವ್ಯಾಪಕ ಭದ್ರತೆ ನಿಯೋಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


