ಯೋಗಿ ಆದಿತ್ಯನಾಥ್ ಅವರದ್ದು ಮೂರ್ಖತನದ ವರ್ತನೆ: ಪತ್ರಕರ್ತರ ಬಂಧನ ಕುರಿತು ರಾಹುಲ್ ಗಾಂಧಿ ಟೀಕೆ
ಅವಹೇಳನಕಾರಿ ಬರಹದ ಹಿನ್ನೆಲೆಯಲ್ಲಿ ಮೂವರು ಪತ್ರಕರ್ತರನ್ನು ಬಂಧಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವರ್ತನೆ ಮೂರ್ಖತನದಿಂದ ಕೂಡಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.

Published On :
ನವದೆಹಲಿ: ಅವಹೇಳನಕಾರಿ ಬರಹದ ಹಿನ್ನೆಲೆಯಲ್ಲಿ ಮೂವರು ಪತ್ರಕರ್ತರನ್ನು ಬಂಧಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವರ್ತನೆ ಮೂರ್ಖತನದಿಂದ ಕೂಡಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ನನ್ನ ವಿರುದ್ಧ ಬಿಜೆಪಿ, ಆರ್ ಎಸ್ ಎಸ್ ಪ್ರಯೋಜಿತ ಸುಳ್ಳು ವರದಿ ಪ್ರಕಟಿಸುವ ಎಲ್ಲಾ ಪತ್ರಕರ್ತರನ್ನು ಜೈಲಿಗೆ ಕಳುಹಿಸುತ್ತೀರಾ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಬಹುತೇಕ ಎಲ್ಲಾ ಪತ್ರಿಕಾ ಹಾಗೂ ಸುದ್ದಿ ಚಾನೆಲ್ ಗಳು ಸಿಬ್ಬಂದಿ ಕೊರತೆಯನ್ನು ಎದುರಿಸುತ್ತೀವೆ ಎಂದು ಹೇಳಿದ್ದಾರೆ.
ಪತ್ರಕರ್ತರನ್ನು ಬಂಧಿಸಿರುವುದು ಮೂರ್ಖತನದಿಂದ ಕೂಡಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಪತ್ರಕರ್ತರನ್ನು ಬಂಧಿಸುವ ಮೂಲಕ ನಮ್ಮ ದೇಶದ ಸಿದ್ಧಾಂತಗಳನ್ನು ಗಾಳಿಗೆ ತೂರಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ.
ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಮೂವರು ಪತ್ರಕರ್ತರನ್ನು ಶನಿವಾರ ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
New DelhiRahul Gandhiರಾಹುಲ್ ಗಾಂಧಿಬಂಧನJournalistಪತ್ರಕರ್ತರುYogi Adityanathಯೋಗಿ ಆದಿತ್ಯನಾಥ್Arrest ನವ ದೆಹಲಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


