ಜೈಶಂಕರ್ ಜೊತೆ ಕೆಲಸ ಮಾಡಿದ್ದ ಸನ್ ವೈಡಾಂಗ್ ಈಗ ಭಾರತಕ್ಕೆ ಚೀನಾದ ರಾಯಭಾರಿ
ಹಾಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಜೊತೆ ಕೆಲಸ ಮಾಡಿದ್ದ ದಕ್ಷಿಣ ಏಷ್ಯಾದ ತಜ್ಞ ಸನ್ ವೈಡಾಂಗ್ ಈಗ ಭಾರತಕ್ಕೆ ಚೀನಾದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

Published On :
ನವದೆಹಲಿ: ಹಾಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಜೊತೆ ಕೆಲಸ ಮಾಡಿದ್ದ ದಕ್ಷಿಣ ಏಷ್ಯಾದ ತಜ್ಞ ಸನ್ ವೈಡಾಂಗ್ ಈಗ ಭಾರತಕ್ಕೆ ಚೀನಾದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಎಸ್ ಜೈಶಂಕರ್ 2009- 2013 ಅವಧಿಯಲ್ಲಿ ಚೀನಾಗೆ ಭಾರತೀಯ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಚೀನಾದ ಡೆಪ್ಯುಟಿ ಡೈರೆಕ್ಟರ್ ಜನರಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸನ್ ವೈಡಾಂಗ್ ಜೈಶಂಕರ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದಾರೆ.
ಪಾಕಿಸ್ತಾನಕ್ಕೆ ಚೀನಾ ರಾಯಭಾರಿಯಾಗಿಯೂ ಕಾರ್ಯನಿರ್ವಹಿಸಿ ಅನುಭವ ಹೊಂದಿರುವ ಸನ್ ವೈಡಾಂಗ್ ಪ್ರಸ್ತುತ ಚೀನಾ ವಿದೇಶಾಂಗ ಇಲಾಖೆಯ ನೀತಿ ಹಾಗೂ ಯೋಜನಾ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.
ಲುವೋ ಝಾಹೋಯಿ, ಭಾರತಕ್ಕೆ ಚೀನಾದ ರಾಯಭಾರಿಯಾಗಿ ಈ ವರೆಗೂ ಕಾರ್ಯನಿರ್ವಹಿಸುತ್ತಿದ್ದರು. ಈಗ ಅವರನ್ನು ಚೀನಾದ ವಿದೇಶಾಂಗ ವ್ಯವಹಾರಗಳ ಉಪ ಸಚಿವರನ್ನಾಗಿ ನೇಮಕ ಮಾಡಲಾಗಿದೆ.
ಚೀನಾದಲ್ಲಿರುವ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ ವೈಡಾಂಗ್ ನೇಮಕಕ್ಕೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


