ವಾಯು ಚಂಡಮಾರುತ ಅಬ್ಬರ: ಗರ್ಭೀಣಿ ಮಹಿಳೆ ರಕ್ಷಿಸಿದ ಎನ್ ಡಿಆರ್ ಎಫ್
ವಾಯು ಚಂಡಮಾರುತದ ಅಬ್ಬರ ಗುಜರಾತಿನ ಸಿಯಾಲ್ ಬೆಟ್ ದ್ವೀಪ ಪ್ರದೇಶದತ್ತ ಮುಖಮಾಡಿದ್ದು, ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿರ್ವಹಣಾ ತಂಡ ಗರ್ಭೀಣಿ ಮಹಿಳೆಯರೊಬ್ಬರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸುವ ಮೂಲಕ ತಾಯಿ ಹಾಗೂ ಮಗುವಿನ ಪ್ರಾಣ ಕಾಪಾಡಿದ್ದಾರೆ.

Published On :
ಗುಜರಾತ್ : ಗುಜರಾತಿನ ಸಿಯಾಲ್ ಬೆಟ್ ದ್ವೀಪ ಪ್ರದೇಶದಲ್ಲಿ ವಾಯು ಚಂಡಮಾರುತದ ಅಬ್ಬರ ಮುಂದುವರೆದಿದ್ದು, ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿರ್ವಹಣಾ ತಂಡ ಗರ್ಭೀಣಿ ಮಹಿಳೆಯರೊಬ್ಬರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸುವ ಮೂಲಕ ತಾಯಿ ಹಾಗೂ ಮಗುವಿನ ಪ್ರಾಣ ಕಾಪಾಡಿದ್ದಾರೆ.
ಸಿಯಾಲ್ ಬೆಟ್ ಗುಜರಾತಿನ ಕರಾವಳಿ ತೀರ ಪ್ರದೇಶಲ್ಲಿರುವ ಸಣ್ಣ ದ್ವೀಪ ಪ್ರದೇಶವಾಗಿದೆ. ಈ ದ್ವೀಪ ಪ್ರದೇಶದಲ್ಲಿ ವಾಸವಿದ್ದ ಮಹಿಳೆಯನ್ನು ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿರ್ವಹಣಾ ತಂಡದ 5 ಬೆಟಲಿಯನ್ ತಂಡ ರಕ್ಷಿಸಿದೆ.
ದೋಣಿಯ ಮೂಲಕ ಜಾಪರಾಬಾದ್ ನಗರದಲ್ಲಿನ ಆಸ್ಪತ್ರೆಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಿ ದಾಖಲಿಸಲಾಗಿದೆ. ನಂತರ ಆ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಎನ್ ಡಿಆರ್ ಎಫ್ ತಂಡ ಸ್ಪಷ್ಪಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


