ಉತ್ತರಪ್ರದೇಶ ಕಾನೂನು ಸುವ್ಯವಸ್ಥೆಗೂ ಜಂಗಲ್ ರಾಜ್ ಗೂ ಯಾವುದೇ ವ್ಯತ್ಯಾಸವಿಲ್ಲ: ಕಾಂಗ್ರೆಸ್
ಉತ್ತರ ಪ್ರದೇಶ ಸರ್ಕಾರದ ಕಾನೂನು ಸುವ್ಯವಸ್ಥೆಗೂ ಹಾಗೂ ಜಂಗಲ್ ರಾಜ್ ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ....

Published On :
ನವದೆಹಲಿ: ಉತ್ತರ ಪ್ರದೇಶ ಸರ್ಕಾರದ ಕಾನೂನು ಸುವ್ಯವಸ್ಥೆಗೂ ಹಾಗೂ ಜಂಗಲ್ ರಾಜ್ ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶ ಬಾರ್ ಕೌನ್ಸಿಲ್ ನ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿದ್ದ ದರ್ವೇಶ್ ಯಾದವ್ ತಮ್ಮ ಸಹೋದ್ಯೋಗಿಯ ಗುಂಡೇಟಿಗೆ ಬಲಿಯಾಗಿದ್ದಾರೆ.
ಆಗ್ರಾ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಘಟನೆಯಲ್ಲಿ ಅಡ್ವೋಕೇಟ್ ಅರವಿಂದ್ ಕುಮಾರ್ ಮಿಶ್ರಾ ಅವರ ಕೋಣೆಯಲ್ಲಿ ಯಾದವ್ ಮೇಲೆ ಮೂರು ಸುತ್ತು ಗುಂಡಿನ ದಾಳಿ ನಡೆದಿತ್ತು.
ಇನ್ನು ಮಿಶ್ರಾ ಮೇಲೆ ಗುಂಡು ಹಾರಿಸಿ ಹತ್ಯೆಗೈದ ಆರೋಪಿ ಅಡ್ವೋಕೇಟ್ ಮನೀಶ್ ಶರ್ಮಾ ತಾವೂ ಸ್ವಯಂ ಗುಂಡು ಹಾರಿಸಿಕೊಂಡಿದ್ದಾರೆ. ಆರೋಪಿ ಶರ್ಮಾ ಸ್ಥಿತಿ ಈಗ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಕೇವಲ ಎರಡು ದಿನಗಳ ಹಿಂದಷ್ತೇ ದರ್ವೇಶ್ ಯಾದವ್ ಬಾರ್ ಕೌನ್ಸಿಲ್ ಹುದ್ದೆಗೆ ಆಯ್ಕೆಯಾಗಿದ್ದರು.
ಉತ್ತರ ಪ್ರದೇಶ ಸರ್ಕಾರದ ಕಾನೂನು ಸುವ್ಯವಸ್ಥೆಗೂ ಹಾಗೂ ಜಂಗಲ್ ರಾಜ್ ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ಉತ್ತರ ಪ್ರದೇಶಜಂಗಲ್ ರಾಜ್Randeep Singh Surjewalajungle ruleUttharpradeshರಣ್ ದೀಪ್ ಸಿಂಗ್ ಸುರ್ಜೆವಾಲಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


