ಎಸ್‌ಸಿಓ ಶೃಂಗಸಭೆಗೆ ಪ್ರಧಾನಿ ಪ್ರಯಾಣ: ಭಾರತವೇ ಬೇಡ ಅಂದ್ರೂ ಮೋದಿಗೆ ವಿಶೇಷ ಒಪ್ಪಿಗೆ ನೀಡಲು ಸಿದ್ಧ ಎನ್ನುತಿದೆ ಪಾಕ್!
ಪಾಕಿಸ್ತಾನ ಮಾತ್ರ ಮೋದಿಗೆ ವಿಶೇಷವಾಗಿ ವಾಯುಮಾರ್ಗ ತೆರೆಯುವುದಕ್ಕೆ ಸಿದ್ಧ ಎಂದು ಹೇಳಿದೆ.

Published On :
ನವದೆಹಲಿ: ಕಿರ್ಗಿಸ್ತಾನದ ರಾಜಧಾನಿ ಬಿಶ್ಕೆಕ್ ನಲ್ಲಿ ಜೂನ್ 13 ಮತ್ತು 14ರಂದು ನಡೆಯಲಿರುವ ಶಾಂಘೈ ಸಹಕಾರ ಸಂಘದ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಾಕ್ ವಾಯುಮಾರ್ಗ ಬಳಕೆ ಮಾಡದಿರಲು ನಿರ್ಧರಿಸಿದ್ದಾರೆ. ಆದರೆ ಪಾಕಿಸ್ತಾನ ಮಾತ್ರ ಮೋದಿಗೆ ವಿಶೇಷವಾಗಿ ವಾಯುಮಾರ್ಗ ತೆರೆಯುವುದಕ್ಕೆ ಸಿದ್ಧ ಎಂದು ಹೇಳಿದೆ.
ಮೋದಿ ಪಾಕ್ ವಾಯು ಮಾರ್ಗ ಬಳಕೆ ಮಾಡುತ್ತಿಲ್ಲ ಎಂದು ವಿದೇಶಾಂಗ ಇಲಾಖೆ ಈಗಾಗಲೇ ಸ್ಪಷ್ಟನೆ ನೀಡಿದೆ. ಆದರೆ ಪಾಕಿಸ್ತಾನದ ವಿಮಾನಯಾನ ಖಾತೆ ಸಚಿವ ಘುಲಮ್ ಸರ್ವಾರ್ ಖಾನ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
" ಪ್ರಧಾನಿ ಇಮ್ರಾನ್ ಖಾನ್ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನಕ್ಕೆ ವಿಶೇಷವಾಗಿ ವಾಯುಮಾರ್ಗವನ್ನು ತೆರೆಯುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
ಸೌಹಾರ್ದಯುತ ಸಂಕೇತವಾಗಿ ಮೋದಿಗೆ ಅವರ ವಿಮಾನ ಪ್ರಯಾಣ ಪಾಕ್ ವಾಯುಮಾರ್ಗದ ಮೂಲಕ ಹಾದು ಹೋಗಲು ಪಾಕಿಸ್ತಾನ ವಿಶೇಷ ಒಪ್ಪಿಗೆ ನೀಡಲು ಸಿದ್ಧ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


