ಪುಲ್ವಾಮ ಎನ್ ಕೌಂಟರ್: ಸೇನೆಯ ಗುಂಡಿಗೆ ಇಬ್ಬರು ಉಗ್ರರು ಹತ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಸೇನೆಯ ದಾಳಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಸೇನೆಯ ದಾಳಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ.
ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೋರಾದಲ್ಲಿನ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಉಗ್ರರ ಕುರಿತ ಖಚಿತ ಮಾಹಿತಿ ಲಭ್ಯವಾದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಸೇನಾಪಡೆಗಳು ಉಗ್ರರು ಅಡಗಿ ಕುಳಿತಿದ್ದ ಮನೆಯನ್ನು ಸುತ್ತುವರೆದಿದ್ದಾರೆ. ಸೇನಾಪಡೆಗಳು ಆಗಮಿಸುತ್ತಿದ್ದಂತೆಯೇ ಅಲ್ಲಿಂದ ತಪ್ಪಿಸಿಕೊಳ್ಳಲು ಉಗ್ರರು ಯತ್ನಿಸಿದ್ದಾರೆ. ಈ ವೇಳೆ ಸೈನಿಕರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸೈನಿಕರು ಕೂಡ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.
ಇನ್ನು ಸತ್ತ ಉಗ್ರರ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಘಟನಾ ಸ್ಥಳದಲ್ಲಿ ಉಗ್ರರು ಸಂಗ್ರಹಿಸಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಪಡಿಸಿಕೊಂಡಿದೆ. ಅಂತೆಯೇ ಘಟನಾ ಪ್ರದೇಶದ ಸುತ್ತಮುತ್ತಲ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಅರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಉಗ್ರರುಶ್ರೀನಗರSrinagarterroristsಜಮ್ಮು ಮತ್ತು ಕಾಶ್ಮೀರJammu and KashmirPulwama encounterಪುಲ್ವಾಮ ಎನ್ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


