ದೇಶ

ಪಶ್ಚಿಮ ಬಂಗಾಳ: ಗುಂಡಿಕ್ಕಿ ಬಿಜೆಪಿ ಕಾರ್ಯಕರ್ತೆ ಹತ್ಯೆ, ಟಿಎಂಸಿ ಕೈವಾಡದ ಶಂಕೆ

ಇಲ್ಲಿನ ಬಸಿರ್ಹಾಟ್ ಎಂಬಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತ ...

ಪಶ್ಚಿಮ ಬಂಗಾಳ: ಗುಂಡಿಕ್ಕಿ ಬಿಜೆಪಿ ಕಾರ್ಯಕರ್ತೆ ಹತ್ಯೆ, ಟಿಎಂಸಿ ಕೈವಾಡದ ಶಂಕೆ
ಸಾಂದರ್ಭಿಕ ಚಿತ್ರ
Published On :
ನಾರ್ಥ್ 24 ಪರ್ಗನಾಸ್(ಪಶ್ಚಿಮ ಬಂಗಾಳ): ಇಲ್ಲಿನ ಬಸಿರ್ಹಾಟ್ ಎಂಬಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತೆ ಸರಸ್ವತಿ ದಾಸ್ ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಗೃಹಿಣಿಯಾಗಿರುವ ಸರಸ್ವತಿ ದಾಸ್ ಅವರನ್ನು ತೃಣಮೂಲ ಕಾಂಗ್ರೆಸ್ ಪಕ್ಷದ ಗೂಂಡಾಗಳು ಕೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. 
ಸರಸ್ವತಿ ದಾಸ್ ಅವರನ್ನು ಟಿಎಂಸಿ ಗೂಂಡಾಗಳು ಕೊಂದು ಹಾಕಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮಮತಾ ಬ್ಯಾನರ್ಜಿಯವರು ಪಶ್ಚಿಮ ಬಂಗಾಳದ ಗೃಹ ಖಾತೆ ಸಚಿವೆ ಕೂಡ ಹೌದು, ಅವರ ಕೈಯಲ್ಲಿ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.
ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಸರಸ್ವತಿ ದಾಸ್ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.