ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಒಪ್ಪಿಕೊಳ್ಳಬೇಡಿ: ಪ್ರಧಾನಿಗೆ 'ಮೆಟ್ರೋ ಮ್ಯಾನ್' ಮನವಿ
ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಯೋಜನೆಯನ್ನು ಒಪ್ಪಿಕೊಳ್ಳಬೇಡಿ...

Published On :
ನವದೆಹಲಿ: ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಯೋಜನೆಯನ್ನು ಒಪ್ಪಿಕೊಳ್ಳಬೇಡಿ ಎಂದು ನಿವೃತ್ತ ದೆಹಲಿ ಮೆಟ್ರೋ ಮುಖ್ಯಸ್ಥ ಇ ಶ್ರೀಧರನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಿಂದ ಸಾರಿಗೆ ವ್ಯವಸ್ಥೆಯನ್ನು ಅದಕ್ಷತೆ ಮತ್ತು ದಿವಾಳಿತನದತ್ತ ಕೊಂಡೊಯ್ಯುತ್ತದೆ. ಆದ್ದರಿಂದ ಈ ಯೋಜನೆಗೆ ಒಪ್ಪಿಗೆ ನೀಡಬೇಡಿ ಎಂದು ಮೆಟ್ರೋ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಶ್ರೀಧರನ್ ಅವರು ಪ್ರಧಾನಿ ಮನವಿ ಮಾಡಿದ್ದಾರೆ.
ಒಂದು ವೇಳೆ ದೆಹಲಿ ಸರ್ಕಾರ ಮಹಿಳಾ ಪ್ರಯಾಣಿಕರಿಗೆ ಸಹಾಯ ಮಾಡಲು ಬಯಸಿದರೆ, ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಹಾಕಲಿ ಎಂದು ಶ್ರೀಧರನ್ ಅವರು ಸಲಹೆ ನೀಡಿದ್ದಾರೆ.
2002 ರಲ್ಲಿ ಮೊದಲ ಬಾರಿಗೆ ದೆಹಲಿಯಲ್ಲಿ ಮೆಟ್ರೋ ಸೇವೆ ಆರಂಭವಾದಾಗ, ಎಲ್ಲರೂ ಟಿಕೆಟ್ ಗಳನ್ನು ಖರೀದಿಸಬೇಕು ಮತ್ತು ಇದಕ್ಕೆ ಯಾರೂ ಹೊರತಾಗಿಲ್ಲ ಎಂದು ಶ್ರೀಧರನ್ ಹೇಳಿದ್ದರು.
ಅವರ ನಿರ್ಧಾರವನ್ನು ಆಗಿನ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಸ್ವಾಗತಿಸಿ ಅವರು ಶಹದಾರಾದಿಂದ ಕಾಶ್ಮೀರ್ ಗೇಟ್ಗೆ ತಮ್ಮ ಮೊದಲ ಮೆಟ್ರೋ ಪ್ರಯಾಣಕ್ಕೆ ಟಿಕೆಟ್ ಖರೀದಿಸಿದ್ದರು.
ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ದೇಶದಲ್ಲಿನ ಇತರೆ ರಾಜ್ಯಗಳಲ್ಲಿನ ಮೆಟ್ರೋಗಳಿಗೆ ಅಪಾಯಕಾರಿ ಆದ್ಯತೆಯಾಗಲಿದೆ ಎಂದು ಅವರು ಪ್ರಧಾನಿ ಬರೆದ ಪತ್ರದಲ್ಲಿ ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿDelhi governmentದೆಹಲಿ ಸರ್ಕಾರMetro Man Sreedharanfree travel scheme for womenಮೆಟ್ರೋ ಮ್ಯಾನ್ ಶ್ರೀಧರನ್ಮಹಿಳೆಯರಿಗೆ ಉಚಿತ ಪ್ರಯಾಣ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


