ಪಶ್ಚಿಮ ಬಂಗಾಳದಲ್ಲಿ ಕಡ್ಡಾಯವಾಗಿ ಬಂಗಾಳಿ ಮಾತನಾಡಬೇಕು: ದೀದಿ ತಾಕೀತು
ಪಶ್ಚಿಮ ಬಂಗಾಳದಲ್ಲಿರುವವರು ಕಡ್ಡಾಯವಾಗಿ ಬಂಗಾಳಿ ಭಾಷೆ. ಒಂದು ವೇಳೆ ಬಂಗಾಳಿ ಬರದಿದ್ದರೆ ಕಲಿಯಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

Published On :
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿರುವವರು ಕಡ್ಡಾಯವಾಗಿ ಬಂಗಾಳಿ ಭಾಷೆ. ಒಂದು ವೇಳೆ ಬಂಗಾಳಿ ಬರದಿದ್ದರೆ ಕಲಿಯಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರಾವರ ತಾಕೀತು ಮಾಡಿದ್ದಾರೆ.
ವೈದ್ಯರ ಮುಷ್ಕರದ ಹಿಂದೆ ಬಂಗಾಳಿಯೇತರ ಜನರ ಕೈವಾಡ ಇದೆ ಎಂದು ಆರೋಪಿಸಿದ ದೀದಿ, ವೈದ್ಯರ ಪ್ರತಿಭಟನೆಯ ಕಿಡಿ ಹಚ್ಚಿದ್ದು ಹೊರಗಿನವರೇ ಎಂಬುದು ತಮಗೆ ಎಂದು ಎಂದರು.
ವೈದ್ಯರಿಗೆ ಹೊರಗಿನವರು ಪ್ರಚೋದನೆ ನೀಡುತ್ತಿದ್ದಾರೆ. ನಿನ್ನೆಯ ಪ್ರತಿಭಟನೆಯಲ್ಲಿ ಹೊರಗಿನವರು ಪಾಲ್ಗೊಂಡಿದ್ದರೆಂದು ನಾನು ಹೇಳಿದ್ದುನಿಜ. ಎಸ್ಎಸ್ಕೆಎಂ ಆಸ್ಪತ್ರೆಯಲ್ಲಿ ಹೊರಗಿನವರು ಘೋಷಣೆಗಳನ್ನ ಕೂಗುತ್ತಿದ್ದುದನ್ನು ನಾನು ನೋಡಿದ್ದೇನೆ ಎಂದು ಟಿಎಂಸಿ ಮುಖ್ಯಸ್ಥೆ ದೂರಿದ್ದಾರೆ.
ಕಿಡಿಗೇಡಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಆದರೆ ಬಂಗಾಳದಲ್ಲಿ ಯಾರಾದರೂ ವಾಸಿಸುತ್ತಿದ್ದರೆ ಅವರು ಬಂಗಾಳಿ ಭಾಷೆಯನ್ನು ಕಲಿಯಬೇಕು ಎಂದರು.
ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ, ಬಿಜೆಪಿ ಬಂಗಾಳದಲ್ಲಿ ಬಂಗಾಳಿ ಹಾಗೂ ಅಲ್ಪಸಂಖ್ಯಾತರನ್ನು ಟಾರ್ಗೆಟ್ ಮಾಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಇವಿಎಂ ಮೆಷೀನ್ಗಳನ್ನ ಪ್ರೋಗ್ರಾಮಿಂಗ್ ಮಾಡಿ ಕೆಲ ಸೀಟುಗಳನ್ನು ಗೆದ್ದ ಮಾತ್ರಕ್ಕೆ ಬಂಗಾಳಿಗಳು ಹಾಗೂ ಅಲ್ಪಸಂಖ್ಯಾತರನ್ನು ಹೊಡೆಯುವುದು ಬಡಿಯುವುದು ಮಾಡುವುದು ಸರಿಯಲ್ಲ. ನಾವು ಇದನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


