ದೇಶ

ನಡುಬೀದಿಯಲ್ಲೇ ನಡೀತು ಘೋರ ಕೃತ್ಯ!ಮಹಿಳಾ ಪೋಲೀಸ್ ಅಧಿಕಾರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ

ಸಹೋದ್ಯೋಗಿ ಒಬ್ಬ ಮಹಿಳಾ ಪೊಲೀಸ್​ ಅಧಿಕಾರಿಯನ್ನು ನಟ್ಟ ನಡು ಬೀದಿಯಲ್ಲೇ ಬೆಂಕಿ ಹಚ್ಚಿ ಕೊಂದು ಹಾಕಿರುವ ಅಮಾನವೀಯ ಘಟನೆ ಕೇರಳದ ಅಲಪ್ಪುಳ ಜಿಲ್ಲೆ ಲ್ಲಿಕುನ್ನಂ ಬಳಿಯ ಕಾಂಜಿಪುಳ ಎಂಬಲ್ಲಿ ನಡೆದಿದೆ.

ನಡುಬೀದಿಯಲ್ಲೇ ನಡೀತು ಘೋರ ಕೃತ್ಯ!ಮಹಿಳಾ ಪೋಲೀಸ್ ಅಧಿಕಾರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ
ಸೌಮ್ಯ ಪುಷ್ಪಾಕರನ್
Published On :
ಅಲಪ್ಪುಳ": ಸಹೋದ್ಯೋಗಿ ಒಬ್ಬ ಮಹಿಳಾ ಪೊಲೀಸ್​ ಅಧಿಕಾರಿಯನ್ನು ನಟ್ಟ ನಡು ಬೀದಿಯಲ್ಲೇ ಬೆಂಕಿ ಹಚ್ಚಿ ಕೊಂದು ಹಾಕಿರುವ ಅಮಾನವೀಯ ಘಟನೆ ಕೇರಳದ ಅಲಪ್ಪುಳ ಜಿಲ್ಲೆ ವಲ್ಲಿಕುನ್ನಂ ಬಳಿಯ ಕಾಂಜಿಪುಳ ಎಂಬಲ್ಲಿ ನಡೆದಿದೆ.
ಮೃತ ಪೋಲೀಸ್ ಅಧಿಕಾರಿಯನ್ನು ಸೌಮ್ಯ ಪುಷ್ಪಾಕರನ್(30) ಎಂದು ಗುರುತಿಸಲಾಗಿದೆ.ಈಕೆ ವಲ್ಲಿಕುನ್ನಂ ಪೊಲೀಸ್​ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿ ಪೋಲೀಸ್ ಅಧಿಕಾರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಇನ್ನು ಬೆಂಕಿ ಹಚ್ಚಿದ ಆರೋಪಿಯನ್ನು ಏಜಾಜ್​  ಎಂದು ಗುರುತಿಸಲಾಗಿದ್ದು ಆತ ಳುವಾ ಸಂಚಾರ ಪೊಲೀಸ್​ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದನು.ಘಟನೆಯಲ್ಲಿ ಆತನಿಗೂ ಸಹ ಗಾಯಗಳಾಗಿದ್ದು ಅವನನ್ನು ವಶಕ್ಕೆ ಪಡೆದಿರುವ ಪೋಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೃತ ಪೋಲೀಸ್ ಅಧಿಕಾರಿ ಎರಡು ಮಕ್ಕಳ ತಾಯಿಯಾಗಿದ್ದಾರೆ. ಘಟನೆಗೆ ಕಾರಣವಿನ್ನೂ ತಿಳಿದು ಬಂದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.